ದೇಶ

ಕಾಶ್ಮೀರ ವಿವಾದ ಬಗೆಹರಿದರೆ ಮಾತ್ರ ದಕ್ಷಿಣ ಏಷ್ಯಾದಲ್ಲಿ ಶಾಂತಿ ಸಾಧ್ಯ: ಪಾಕ್

Srinivas Rao BV
ಇಸ್ಲಾಮಾಬಾದ್: ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸಲು ಕಾಶ್ಮೀರ ವಿವಾದವನ್ನು ಬಗೆಹರಿಸಬೇಕು ಎಂದು ಪಾಕಿಸ್ತಾನ ಪ್ರಧಾನಿಯ ವಿದೇಶಾಂಗ ಸಲಹೆಗಾರ ಸರ್ತಾಜ್ ಅಜೀಜ್ ಅಭಿಪ್ರಾಯಪಟ್ಟಿದ್ದಾರೆ. 
ದಕ್ಷಿಣ ಏಷ್ಯಾದಲ್ಲಿ ಶಾಂತಿ ಹಾಗೂ ಸಹಕಾರ ವೃದ್ಧಿಯ ಕುರಿತು ನಡೆದ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿರುವ ನವಾಜ್ ಷರೀಫ್ ಅವರ ವಿದೇಶಾಂಗ ಸಲಹೆಗಾರ ಅಜೀಜ್, ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಕ್ರೂರ ಕೃತ್ಯದಿಂದ ದಕ್ಷಿಣ ಏಷ್ಯಾದಲ್ಲಿ ಶಾಂತಿ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ. 
ಪಾಕಿಸ್ತಾನ ಶಾಂತಿ ಕಾಪಾಡಲು ನಿರಂತರವಾಗಿ ಯತ್ನಿಸುತ್ತಿರುವುದರ ಹೊರತಾಗಿಯೂ ಭಾರತ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ದೌರ್ಜನ್ಯ ಎಸಗುತ್ತಿದೆ ಎಂದು ಸರ್ತಾಜ್ ಅಜೀಜ್ ಆರೋಪಿಸಿರುವುದನ್ನು ಪತ್ರಿಕೆಯೊಂದು ವರದಿ ಮಾಡಿದೆ. ಉಭಯ ರಾಷ್ಟ್ರಗಳೂ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಂಡರೆ ಮಾತ್ರ ದಕ್ಷಿಣ ಏಷ್ಯಾದಲ್ಲಿ ಶಾಂತಿ ನೆಲೆಸಲು ಸಾಧ್ಯವಾಗಲಿದೆ ಎಂದು ಸರ್ತಾಜ್ ಅಜೀಜ್ ಅಭಿಪ್ರಾಪಟ್ಟಿದ್ದಾರೆ. 
SCROLL FOR NEXT