ನರೇಂದ್ರ ಮೋದಿ 
ದೇಶ

ನೋಟ್ ನಿಷೇಧ: ತುರ್ತು ಸಂಪುಟ ಸಭೆ ಕರೆದ ಪ್ರಧಾನಿ ಮೋದಿ

500 ಹಾಗೂ 1000 ನೋಟ್ ನಿಷೇಧಿಸಿದ ನಂತರ ಆರಂಭವಾಗಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿ,...

ನವದೆಹಲಿ: 500 ಹಾಗೂ 1000 ನೋಟ್ ನಿಷೇಧಿಸಿದ ನಂತರ ಆರಂಭವಾಗಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿ, ಸರ್ಕಾರದ ವಿರುದ್ಧ ಸಮರ ಸಾರಿದ್ದು, ಈ ಸಂಬಂಧ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ನೋಟ್ ನಿಷೇಧ ಸಂಬಂಧ ರಾಜ್ಯಸಭೆ ಮತ್ತು ಲೋಕಸಭೆ ಕಲಾಪ ಪದೆಪದೇ ಮುಂದೂಡಿಕೆಯಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮೋದಿ ಇಂದು ಸ್ವತಃ ಸದನಕ್ಕೆ ಹಾಜರಾದರು. ಅಲ್ಲದೆ ರಾತ್ರಿ 8ಗಂಟೆಗೆ ಸಂಪುಟ ಸಭೆ ಕರೆದಿದ್ದಾರೆ.
ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪ ಇಂದು ಎರಡು ಬಾರಿ ಮುಂದೂಡಿಕೆಯಾಗಿತ್ತು. ಅಲ್ಲದೆ ಪ್ರಧಾನಿ ಮೋದಿ ಅವರು ಸದನಕ್ಕೆ ಬಂದು ಉತ್ತರಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದ ಹಿನ್ನೆಲೆಯಲ್ಲಿ ಸದನಕ್ಕೆ ಪ್ರಧಾನಿ ಹಾಜರಾಗಿದ್ದರು. ಮಧ್ಯಾಹ್ನ 12ಗಂಟೆಗೆ ಆಗಮಿಸಿದ್ದ ಪ್ರಧಾನಿ ಸುಮಾರು 1ಗಂಟೆಯವರೆಗೆ ಇದ್ದರು. ಆದರೆ ಭೋಜನ ವಿರಾಮದ ನಂತರ ಮತ್ತೆ ಬರಲಿಲ್ಲ.
ಆರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡುತ್ತ ಪ್ರಧಾನಿ ಮೋದಿ ಎದುರೇ ನೋಟು ನಿಷೇಧದ ಕ್ರಮದ ಬಗ್ಗೆ ಬಲವಾಗಿ ಆಕ್ಷೇಪವ್ಯಕ್ತಪಡಿಸಿದರು. ನೋಟು ನಿಷೇಧದಿಂದಾಗಿ ಜನಸಾಮಾನ್ಯರು ಮತ್ತು ಸಣ್ಣ ವ್ಯಾಪಾರಿಗಳು ಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಜಿಡಿಪಿ ಮೇಲೆ ಶೇ.2ರಷ್ಟು ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಸಿಂಗ್ ವಿಶ್ಲೇಷಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?