ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಅಡಗಿ ಕುಳಿತು ಗುಂಡಿನ ದಾಳಿ ನಡೆಸುತ್ತಿದ್ದ ಓರ್ವ ಉಗ್ರನನ್ನು ಸೆರೆಹಿಡಿಯುವಲ್ಲಿ ಭಾರತೀಯ ಸೇನೆ ಶುಕ್ರವಾರ ಯಶಸ್ವಿಯಾಗಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೊರ್ ನ ತುಜ್ಜೆರ್ ಗ್ರಾಮದಲ್ಲಿ ಉಗ್ರರು ಗುಂಪೊಂದು ಅಡಗಿ ಕುಳಿತಿತ್ತು. ಉಗ್ರರ ನುಸುಳಿರುವಿಕೆಯ ಶಂಕೆ ಮೇರೆಗೆ ಸೇನೆ ಕಾರ್ಯಾಚರಣೆಗಿಳಿದಿತ್ತು ಈ ವೇಳೆ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಯೋಧರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ಇದೀಗ ಓರ್ವ ಉಗ್ರನನ್ನು ಸೆರೆಹಿಡಿಯುವಲ್ಲಿ ಸೇನೆ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಅಡಗಿ ಕುಳಿತಿದ್ದು, ಸೇನೆ ತನ್ನ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ. ಸ್ಥಳದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡುನ ಚಕಮಕಿ ನಡೆಯುತ್ತಿರುವುದಾಗಿ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಬಂಡೀಪುರದಲ್ಲೂ ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಆರ್'ಪಿಎಫ್ 45 ಬೆಟಾಲಿಯನ್ ಜೊತೆಗೆ 13 ರಾಷ್ಟ್ರೀಯ ರೈಫಲ್ಸ್ ಮತ್ತು ರಾಜ್ಯ ಪೊಲೀಸರ ತಂಡ ಜಂಟಿಯಾಗಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಯಾಗಿದ್ದರು.
ಹತ್ಯೆಯಾದ ಉಗ್ರ ಬಳಿ ಎರಡು ಎಕೆ47, 1 ಯುಬಿಜಿಎಲ್ ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ಸೇನೆ ವಶಕ್ಕೆ ಪಡೆದುಕೊಂಡಿತ್ತು.