ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ 
ದೇಶ

ಪಾಕ್ ಆಕ್ರಮಿತ ಕಾಶ್ಮೀರವನ್ನು ಪಡೆಯಲು ಭಾರತಕ್ಕೆ ಧೈರ್ಯವಿಲ್ಲ: ಫಾರೂಕ್ ಅಬ್ದುಲ್ಲಾ

ಪಾಕಿಸ್ತಾನದ ಆಕ್ರಮಿತ ಕಾಶ್ಮೀರ ಪ್ರದೇಶವನ್ನು ವಾಪಸ್ ಪಡೆಯಲು ಭಾರತಕ್ಕೆ ಧೈರ್ಯವಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಶ್ರೀನಗರ: ಪಾಕಿಸ್ತಾನದ ಆಕ್ರಮಿತ ಕಾಶ್ಮೀರ ಪ್ರದೇಶವನ್ನು ವಾಪಸ್ ಪಡೆಯಲು ಭಾರತಕ್ಕೆ ಧೈರ್ಯವಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. 
ಕಿಸ್ತ್ವಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ನ್ಯಾಷನಲ್ ಕಾನ್ಫರೆನ್ಸ್ ನ ಅಧ್ಯಕ್ಷ ಭಾರತ ಹಾಗೂ ಪಾಕಿಸ್ತಾನ ಮಾತುಕತೆ ಮೂಲಕ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಯುದ್ಧ ಸಮಸ್ಯೆಗೆ ಪರಿಹಾರವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಶ್ಮೀರ ವಿವಾದಲ್ಲಿ ಪಾಕಿಸ್ತಾನವನ್ನು ಸಂಬಂಧಿಸಿದ ರಾಷ್ಟ್ರ ಎಂದು ಸ್ವತಃ ಭಾರತ ಸರ್ಕಾರವೇ ಒಪ್ಪಿಕೊಂಡಿದೆ ಅಷ್ಟೇ ಅಲ್ಲದೇ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವೆಂಬ ನಿರ್ಣಯ ಸಹ ಇದೆ, ಇದೇನು ಇವರ ಪಿತ್ರಾರ್ಜಿತ ಆಸ್ತಿಯೇ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. 
ಪಾಕ್ ಆಕ್ರಮಿತ ಕಾಶ್ಮೀರದ ಭಾಗಗಳನ್ನು ವಾಪಸ್ ಪಡೆಯಲು ಭಾರತಕ್ಕೆ ಧೈರ್ಯವಿಲ್ಲ, ಹಾಗೆಯೇ ಕಾಶ್ಮೀರವನ್ನು ವಶಕ್ಕೆ ಪಡೆಯಲು ಪಾಕಿಸ್ತಾನಕ್ಕೂ ಧೈರ್ಯವಿಲ್ಲ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಇರಬೇಕಾದರೆ ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್