ಪಂಜಾಬ್: ಭಾರತದ ಜತೆಗೆ ಸಮರ ಸಾರುವುದನ್ನು ಬಿಟ್ಟು ಭ್ರಷ್ಟಾಚಾರ ಮತ್ತು ಕಪ್ಪುಹಣದ ವಿರುದ್ಧ ಪಾಕಿಸ್ತಾನಿಗಳು ಹೋರಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಜಾಬ್ ನ ಬಟಿಂಡಾದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಏಮ್ಸ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇಸಿರಿ ಮಾತನಾಡಿ ಪಾಕಿಸ್ತಾನ ವಿರುದ್ಧ ವಾಗ್ದಾಳಿ ನಡೆಸಿದರು. ಪಾಕಿಸ್ತಾನ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಲ್ಲಿನ ಜನರೇ ಬೇಸತ್ತಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಸೀಮಿತಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಸರ್ಕಾರ ಯುದ್ಧೋತ್ಸಾಹ ಪ್ರಕಟಿಸಿರುವುದಕ್ಕೆ ಜನರು ಬೇಸರ ವ್ಯಕ್ತಪಡಿಸಿದ್ದಾರೆ ಎಂದರು.
ಭಾರತ ವಿರುದ್ಧ ಸಮರ ಸಾರುವುದನ್ನು ಬಿಟ್ಟು ಭ್ರಷ್ಟಾಚಾರ, ಕಪ್ಪುಹಣದ ಹಾಗೂ ಬಡತನದ ವಿರುದ್ಧ ಸಮರ ಸಾರುವಂತೆ ಪಾಕಿಸ್ತಾನಿಗಳು ತಮ್ಮನ್ನಾಳುವ ನಾಯಕರನ್ನು ಪ್ರಶ್ನಿಸಬೇಕು ಎಂದರು.
ಇದೇ ವೇಳೆ ಸಿಂಧು ನದಿ ನೀರಿನ ಹಂಚಿಕೆ ಬಗ್ಗೆ ಮಾತನಾಡಿದ ಮೋದಿ ಅವರು, ಭಾರತದ ಹಕ್ಕಿನ ನೀರು ಪಾಕಿಸ್ತಾನಕ್ಕೆ ಹೋಗುವುದಿಲ್ಲ. ಪಂಜಾಬಿನ ರೈತರ ನೀರಿನ ಹಕ್ಕನ್ನು ಪಾಲಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics