ನವದೆಹಲಿ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆ ಮೇಲೆ ಗುರುವಾರ ರಾತ್ರಿ ಉಗ್ರರು ದಾಳಿ ನಡೆಸಿದ್ದಾರೆ.
ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿರುವ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿರುವ ಉಗ್ರರು, ಮನಬಂದಂತೆ ಗುಂಡಿನ ದಾಳಿಯನ್ನು ನಡೆಸಿದ್ದು, ಗ್ರೆನೇಡ್ ಗಳನ್ನು ಎಸೆದಿದ್ದಾರೆಂದು ತಿಳಿದುಬಂದಿದೆ.
ಉಗ್ರರು ದಾಳಿ ಮಾಡುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಉಗ್ರರಿಗೆ ದಿಟ್ಟ ಉತ್ತರವನ್ನು ನೀಡಿತ್ತು. ಪೊಲೀಸರ ದಾಳಿಗೆ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ತಪ್ಪಿಸಿಕೊಂಡಿರುವ ಉಗ್ರರಿಗಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.