ದೇಶ

26/11 ಮುಂಬೈ ಉಗ್ರರ ದಾಳಿ 8 ವರ್ಷ: ಕರಾಳ ದಿನ ನೆನೆದ ದೇಶದ ಜನತೆ

Manjula VN

ಮುಂಬೈ: 26/11 2008ರ ಮುಂಬೈ ಮೇಲಿನ ಉಗ್ರರ ದಾಳಿ ನಡೆದು 8 ವರ್ಷ ಕಳೆದಿದ್ದು, ದಾಳಿಯಲ್ಲಿ ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.

ಕರಾಳ ದಿನದ ನೆನಪು ಹಿನ್ನಲೆಯಲ್ಲಿ ದೇಶದಾದ್ಯಂತ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಪ್ರಮುಖವಾಗಿ ಮುಂಬೈ ನಗರಿಯಲ್ಲಿ ದಾಳಿಯಲ್ಲಿ ಅಸುನೀಗಿದ ಅಮಾಯಕ ಜನರು ಹಾಗೂ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

2008ರ ನವೆಂಬರ್ 26ರಂದು ಪಾಕಿಸ್ತಾನದ 10 ಉಗ್ರರು ಭಾರತದೊಳಗೆ ಸಮುದ್ರದ ಮುಖಾಂತರ ನುಸುಳಿ, ವಾಣಿಜ್ಯ ನಗರಿ ಮುಂಬೈನ 7 ಕಡೆ ದಾಳಿ ನಡೆಸಿ, 166 ಜನರನ್ನು ಬಲಿ ತೆಗೆದುಕೊಂಡಿದ್ದರು.

26/11/2008ರಂದು ಮುಂಬೈನ್ ಪ್ರಸಿದ್ಧ ತಾಜ್ ಹೋಟೆಲ್, ಛತ್ರಪತಿ ಶಿವಾಜಿ ಟರ್ಮಿನಸ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿದ್ದರು. ಘಟನೆಯಲ್ಲಿ 166 ಜನರು ಮೃತಪಟ್ಟಿದ್ದು, 308 ಜನರು ಗಾಯಗೊಂಡಿದ್ದರು.

ಸುಮಾರು 10 ಉಗ್ರರು ಈ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು.

SCROLL FOR NEXT