ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿದ್ದ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧನಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.
ಹಂದ್ವಾರದಲ್ಲಿದ್ದ ಸೇನಾ ಕೇಂದ್ರದ ಮೇಲೆ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದು, ಉಗ್ರರ ಗುಂಡಿನ ದಾಳಿಗೆ 1 ಬಿಎಸ್ಎಫ್ ಯೋಧ ಗಾಯಗೊಂಡಿದ್ದಾನೆಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗಾಯಗೊಂಡ ಯೋಧನನ್ನು ಈಗಾಗಲೇ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಯೋಧ ಚೇತರಿಸಿಕೊಳ್ಳುತ್ತಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.