ಹೈದರಾಬಾದ್: ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಯೋಗಾಭ್ಯಾಸ
ಹೈದರಾಬಾದ್ ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಪೊಲೀಸ್ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.
ಹೈದರಾಬಾದ್: ಹೈದರಾಬಾದ್ ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಪೊಲೀಸ್ ಅಧಿಕಾರಿಗಳೊಂದಿಗೆ ಯೋಗಾಭ್ಯಾಸ ಮಾಡಿದ್ದಾರೆ.
ನ.25 ರಂದು ರಾತ್ರಿ ಹೈದರಾಬಾದ್ ಗೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಕೇಂದ್ರ ಅರೆಸೇನಾಪಡೆ, ಗುಪ್ತಚರ ವಿಭಾಗದ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ನ.26 ರಂದು ಬೆಳಿಗ್ಗೆ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಡಿಜಿಪಿ, ಐಜಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ಯೋಗಾಭ್ಯಾಸ ಮಾಡಿದರು.
ನಂತರ ದೇಶದ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಹಾಗೂ ಹುತಾತ್ಮ ಪೊಲೀಸರಿಗೆ ಪ್ರಧಾನಿ ಗೌರವ ಅರ್ಪಿಸಿದ್ದು, ಅಕಾಡೆಮಿಯಲ್ಲಿ ನಡೆಯುತ್ತಿರುವ ತರಬೇತಿಯನ್ನು ಪರಿಶೀಲಿಸಿದ್ದಾರೆ. ನಂತರ ಪೊಲೀಸ್ ಉನ್ನತಾಧಿಕಾರಿಗಳ 51ನೇ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಭದ್ರತೆಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಿವರಾಂಪಲ್ಲಿಯ ಪೊಲೀಸ್ ಅಕಾಡೆಮಿಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.