ನವದೆಹಲಿ: ಡಿ.4 ರಂದು ಅಮೃತ್ ಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಪಾಕ್ ಪ್ರತಿನಿಧಿ ಸರ್ತಾಜ್ ಅಜೀಜ್ ಭಾಗವಹಿಸುವಿಕೆ ಸೀಮಿತ ಅವಧಿಗೆ ನಿಗದಿಯಾಗಿದ್ದು, ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ ಕ್ಷೀಣಿಸಿದೆ.
ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ ಪಾಕಿಸ್ತಾನದ ಪ್ರತಿನಿಧಿಯಾಗಿ ಪಾಕ್ ಪ್ರಧಾನಿಯ ವಿದೇಶಾಂಗ ವಿಷಯಗಳ ಸಲಹೆಗಾರ ಸರ್ತಾಜ್ ಅಜೀಜ್ ಡಿ.4 ರಂದೇ ಅಮೃತ್ ಸರಕ್ಕೆ ಬಂದು ಅಂದೇ ಸಂಜೆ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಉಳಿದ ದೇಶಗಳ ಪ್ರತಿನಿಧಿಗಳು ಸಮ್ಮೇಳನಕ್ಕೆ ಒಂದು ದಿನ ಮುಂಚಿತವಾಗಿ ನವದೆಹಲಿಗೆ ಆಗಮಿಸಿದರೆ ಸರ್ತಾಜ್ ಅಜೀಜ್ ಭಾರತ ಭೇಟಿಯನ್ನು ಸಾಧ್ಯವಾದಷ್ಟು ಮೊಟಕುಗೊಳಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಕ್ಷೀಣಿಸುವ ಸಾಧ್ಯತೆ ದಟ್ಟವಾಗಿದೆ.
ಆದರೆ ದ್ವಿಪಕ್ಷೀಯ ಮಾತುಕತೆ ನಡೆಯುವುದು ನಡೆಯದೇ ಇರುವುದರ ಬಗ್ಗೆ ಈ ವರೆಗೂ ಯಾವುದೇ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ, ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕಾಸ್ ಸ್ವರೂಪ್ ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.