ನವಜೋತ್ ಕೌರ್ ಹಾಗೂ ಪರ್ಗಾತ್ ಸಿಂಗ್ ರೊಂದಿಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್ 
ದೇಶ

ನವಜೋತ್ ಕೌರ್ ಹಾಗೂ ಪರ್ಗಾತ್ ಸಿಂಗ್ ಕಾಂಗ್ರೆಸ್ ಸೇರ್ಪಡೆ

ಮಾಜಿ ಬಿಜೆಪಿ ಶಾಸಕಿ ಹಾಗೂ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ಡಾ. ನವಜೋತ್ ಕೌರ್ ಮತ್ತು ಮಾಜಿ ಒಲಂಪಿಯನ್....

ಚಂಡೀಗಢ: ಮಾಜಿ ಬಿಜೆಪಿ ಶಾಸಕಿ ಹಾಗೂ ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ಡಾ. ನವಜೋತ್ ಕೌರ್ ಮತ್ತು ಮಾಜಿ ಒಲಂಪಿಯನ್ ಪರ್ಗಾತ್ ಸಿಂಗ್ ಅವರು ಸೋಮವಾರ ದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇತ್ತೀಚಿಗಷ್ಟೇ ಬಿಜೆಪಿ ಪ್ರಾಥಮಿಕ ಸಂದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದ ಕೌರ್ ಅವರು ಇಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ರಾಜ್ಯ ಉಸ್ತುವಾರಿ ಆಶಾ ಕುಮಾರಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. 
ಕಾಂಗ್ರೆಸ್ ಸೇರಿದ ನಂತರ ನಿಮ್ಮ ಪತಿ ನವಜೋತ್ ಸಿಂಗ್ ಸಿಧು ಅವರು ಕೈಹಿಡಿಯುತ್ತಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸಿದ ಕೌರ್, ತಕ್ಷಣಕ್ಕೆ ಏನು ಹೇಳಲ್ಲ. ಆದರೆ ನಾವಿಬ್ಬರೂ ಒಂದು ಆತ್ಮ ಎರಡು ದೇಹವಿದ್ದಂತೆ. ಹೀಗಾಗಿ ಆತ್ಮ ಬಿಟ್ಟು ದೇಹ ಎಷ್ಟು ದಿನ ದೂರವಿರಲು ಸಾಧ್ಯ ಹೇಳಿ? ಮರು ಪ್ರಶ್ನಿಸುವ ಮೂಲಕ ಮುಂದೆ ತಮ್ಮ ಪತಿಯೂ ಕಾಂಗ್ರೆಸ್ ಸೇರುವ ಸೂಚನೆ ನೀಡಿದ್ದಾರೆ.
ಇನ್ನು ಶಿರೋಮಣಿ ಅಕಾಲಿ ದಳದ ಮಾಜಿ ಶಾಸಕರಾಗಿರುವ ಪರ್ಗತ್ ಸಿಂಗ್ ಅವರು, 2012ರಲ್ಲಿ ಜಲಂದರ್ ವಿಧಾನಸಭಾ ಕ್ಷೇತ್ರದಿಂದ ಗೆಲವು ಸಾಧಿಸಿದ್ದರು. ಇದೀಗ ಅಕಾಲಿ ದಳ ತೊರೆದು ಕಾಂಗ್ರೆಸ್ ಸೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT