ನೋಟು ನಿಷೇಧ: ಹಿರಿಯ ಸಚಿವರೊಂದಿಗೆ ಸಭೆ ನಡೆಸಲಿರುವ ಪ್ರಧಾನಿ ಮೋದಿ
ಸಂಸತ್ತು ಕಲಾಪದಲ್ಲಿ ನೋಟು ನಿಷೇಧ ಕುರಿತಂತೆ ತೀವ್ರ ಗದ್ದಲ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಸಭೆ ಸೋಮವಾರ...
ನವದೆಹಲಿ: ಸಂಸತ್ತು ಕಲಾಪದಲ್ಲಿ ನೋಟು ನಿಷೇಧ ಕುರಿತಂತೆ ತೀವ್ರ ಗದ್ದಲ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಸಭೆ ಸೋಮವಾರ ಸಭೆ ನಡೆಸಲಿದ್ದಾರೆ.
ನೋಟು ನಿಷೇಧ ಕುರಿತಂತೆ ಈಗಾಗಲೇ ಸಂಸತ್ತಿನ ಎದುರು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದು, ವಿರೋಧ ಪಕ್ಷಗಳ ಗದ್ದಲಕ್ಕೆ ಕಡಿವಾಣ ಹಾಕುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಿರಿಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.
ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಹಲವು ದಿನಗಳ ಕಳೆದರೂ, ನೋಟು ನಿಷೇಧ ಕುರಿತಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆಗಳನ್ನು ನಡೆಸಿ ಕಪಾಲಕ್ಕೆ ಅಡ್ಡಿಯುಂಟು ಮಾಡುತ್ತಿವೆ. ಕಳೆದ ಶುಕ್ರವಾರ ಕೂಡ ವಿರೋಧ ಪಕ್ಷಗಳು ತೀವ್ರ ಗದ್ದಲವುಂಟು ಮಾಡಿದ್ದ ಹಿನ್ನೆಲೆಯಲ್ಲಿ ಕಲಾಪವನ್ನು ಇಂದಿಗೆ ಮುಂದೂಡಲಾಗಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.