6 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ನಾಲ್ವರು ಅಪ್ರಾಪ್ತರ ಬಂಧನ
ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ರಿಂದ 14 ವರ್ಷ ವಯಸ್ಸಿನ ನಾಲ್ವರು ಅಪ್ರಾಪ್ತರನ್ನು ಪುಣೆ ಪೊಲೀಸರು ...
ಪುಣೆ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ರಿಂದ 14 ವರ್ಷ ವಯಸ್ಸಿನ ನಾಲ್ವರು ಅಪ್ರಾಪ್ತರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಅಣ್ಣಾ ಸಾಹೇಬ್ ಮಗರ್ ಸ್ಲಂ ನ ನಾಲ್ವರು ಬಾಲಕರು, ಪಿಂಪ್ರಿ ಪ್ರದೇಶದಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಕರೆದುಕೊಂಡು ನಿರ್ಜನ ಪ್ರದೇಶಕ್ಕೆ ತೆರಳಿದ ಅಪ್ರಾಪ್ತರು ಅಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರ ಎಂದು ಪಿಂಪಿರಿ ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರದಿಂದ ಆಘಾತಕ್ಕೊಳಗಾದ ಬಾಲಕಿ ತನ್ನ ತಾಯಿಯ ಬಳಿ ನಡೆದ ವಿಷಯವನ್ನೆಲ್ಲಾ ತಿಳಿಸಿದ್ದಾಳೆ. ನಂತರ ಆಕೆಯ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರು ಬಾಲಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.