ಚೆನ್ನೈ: ಪೊಲೀಸರ ಅನುಮತಿ ಇಲ್ಲದೆ ನೋಟ್ ನಿಷೇಧದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆಯ ಖಜಾಂಚಿ ಎಂ.ಕೆ.ಸ್ಟಾಲಿನ್ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಸೋಮವಾರ ತಮಿಳುನಾಡು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಂದ್ರ ಸರ್ಕಾರ 500 ಹಾಗೂ 1000 ನೋಟ್ ನಿಷೇಧದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಯಾವುದೇ ಬಂದ್ ಇರುವುದಿಲ್ಲ ಎಂದು ಪ್ರತಿಪಕ್ಷಗಳು ಘೋಷಿಸಿದ್ದವು. ಹೀಗಾಗಿ ತಮಿಳುನಾಡಿನಲ್ಲಿ ಜನಜೀವನ ಎಂದಿನಂತೆ ಸಹಜವಾಗಿದೆ.
ರಾಜಾಜಿ ಸಲಾಯಿಯಲ್ಲಿರುವ ಇಂಡಿಯನ್ ಬ್ಯಾಂಕ್ ಕಚೇರಿ ಬಳಿ ಸೇರಿದ ಡಿಎಂಕೆ ನಾಯಕರು, ಸ್ಟಾಲಿನ್ ನೇತೃತ್ವದಲ್ಲಿ ಧರಣಿ ನಡೆಸುತ್ತಿದ್ದರು. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂಬ ಪೊಲೀಸರು ಸ್ಟಾಲಿನ್ ಹಾಗೂ ಇತರೆ ನಾಯಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಟಾಲಿನ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗಿದೆ.
ಈ ಮಧ್ಯೆ ಅಣ್ಣಾ ಸಲಾಯಿನ ಮುಖ್ಯ ಅಂಚೆ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡು ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ತಿರುನವುಕ್ಕರಸರ್ ಅವರು ಸೇರಿದಂತೆ ಹಲವು ಕಾಂಗ್ರೆಯ್ ನಾಯಕರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics