ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದು ನಾಲ್ಕೇ ಉಗ್ರರು!

ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದ ಉಗ್ರರು ಎಷ್ಟು ಜನ ಎಂಬ ಪ್ರಶ್ನೆಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದು ನಾಲ್ಕೇ ಜನ ಉಗ್ರರು ಎಂದು ಸ್ಪಷ್ಟನೆ ನೀಡಿದೆ.

Srinivas Rao BV
Updated On : 29 Nov 2016, 6:39 am
ನವದೆಹಲಿ: ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದ ಉಗ್ರರು ಎಷ್ಟು ಜನ ಎಂಬ ಪ್ರಶ್ನೆಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು ಪಠಾಣ್ ಕೋಟ್ ವಾಯುನೆಲೆಗೆ ನುಗ್ಗಿದ್ದು ನಾಲ್ಕೇ ಜನ ಉಗ್ರರು ಎಂದು ಸ್ಪಷ್ಟನೆ ನೀಡಿದೆ. 
ಸಂಸತ್ ನಲ್ಲಿ ಕಾಂಗ್ರೆಸ್ ಪ್ರಶ್ನೆಗೆ ಉತ್ತರಿಸುತ್ತಾ, ಉಗ್ರರ ಸಂಖ್ಯೆ ಬಗ್ಗೆ ಮಾಹಿತಿ ನೀಡಿರುವ ಗೃಹ ಖಾತೆ ರಾಜ್ಯ ಸಚಿವ ಹಂಸರಾಜ್ ಗಂಗಾರಾಮ್ ಅಹಿರ್, ಪಠಾಣ್ ಕೋಟ್ ವಾಯುನೆಲೆಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಅಲ್ಲಿಗೆ ನುಗ್ಗಿದ್ದು 4 ಜನ ಉಗ್ರರು ಎಂದು ಲಿಖಿತ ಉತ್ತರ ನೀಡಿದ್ದಾರೆ. 
ವಾಯುನೆಲೆಯೊಳಗೆ ನುಗ್ಗಿದ್ದ ಎಲ್ಲಾ ಉಗ್ರರನ್ನೂ ಸೇನಾಪಡೆ ಹೊಡೆದುರುಳಿಸಿದ್ದು 4 ಎಕೆ ರೈಫಲ್ ಗಳು 32 ಎಕೆ ಮ್ಯಾಗಜೀನ್, 3 ಪಿಸ್ತೂಲು, 7 ಪಿಸ್ತೂಲ್ ಮ್ಯಾಗಜೀನ್ ಗಳು ಒಂದು ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್, 40 ಹ್ಯಾಂಡ್ ಗ್ರೆನೇಡ್ ಗಳು ಒಂದು ಡ್ರ್ಯಾಗರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಚರು ಸದನದಲ್ಲಿ ಕಾಂಗ್ರೆಸ್ ಸಂಸದರ ಪ್ರಶ್ನೆಗೆ ಉತ್ತರಿಸಿದ್ದಾರೆ. 

Advertisement

Advertisement

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿ ಪ್ರಕರಣದಲ್ಲಿ ಒಟ್ಟು 6 ಜನ ಉಗ್ರರು ಶಾಮೀಲಾಗಿದ್ದರು ಎಂದು ಹೇಳಿದ್ದರು. ಆದರೆ ಈಗ ಗೃಹ ಖಾತೆ ರಾಜ್ಯ ಸಚಿವರು ನೀಡಿರುವ ಅಂಕಿ-ಅಂಶಗಳು ಈ ಹಿಂದಿನ ಹೇಳಿಕೆಗಳಿಗಿಂತ ಭಿನ್ನವಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments