ಭಗವಂತ್ ಮಾನ್ 
ದೇಶ

ಸಂಸತ್ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ಭಗವಂತ್ ಮಾನ್ ತಪ್ಪಿತಸ್ಥ: ಲೋಕಸಭಾ ಸಮಿತಿ

ಸಂಸತ್ ನಿಯಮಗಳನ್ನು ಉಲ್ಲಂಘಿಸಿದ್ದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಅವರನ್ನು ತಪ್ಪಿತಸ್ಥ ಎಂದು 9 ಸದಸ್ಯ ಲೋಕಸಭಾ ಸಮಿತಿ ತೀರ್ಪು ನೀಡಿದೆ.

ನವದೆಹಲಿ: ಸಂಸತ್ ನಿಯಮಗಳನ್ನು ಉಲ್ಲಂಘಿಸಿದ್ದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಅವರನ್ನು ತಪ್ಪಿತಸ್ಥ ಎಂದು 9 ಸದಸ್ಯ ಲೋಕಸಭಾ ಸಮಿತಿ ತೀರ್ಪು ನೀಡಿದೆ. 
ನಿಯಮಗಳನ್ನು ಉಲ್ಲಂಘಿಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 9 ಸದಸ್ಯರ ಸಮಿತಿಯೊಂದನ್ನು ರಚಿಸಿದ್ದರು.  
ಆಮ್ ಆದ್ಮಿ ಪಕ್ಷದ ಸಂಸದ ಭಗವಂತ್ ಮಾನ್ ಅವರನ್ನು ತಪ್ಪಿತಸ್ಥ ಎಂದು ಕಿರಿಟ್‌ ಸೋಮಯ್ಯ ನೇತೃತ್ವದ ಸಮಿತಿ ಘೋಷಿಸಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಭಗವಂತ್ ಮಾನ್ ಅವರಿಗೆ ತಮ್ಮ ನಿಲುವನ್ನು ವಿವರಿಸಲು ಮೂರು ಆಗಸ್ಟ್ ನಲ್ಲಿ 4 ಅವಕಾಶಗಳನ್ನು ನೀಡಲಾಗಿತ್ತು. ಆದರೆ 4 ಅವಕಾಶಗಳಲ್ಲೂ ಭಗವಂತ್ ಮಾನ್ ಪರಸ್ಪರ ವಿರುದ್ಧ ನಿಲುವನ್ನು ವಿವರಿಸಿದ್ದರು. 
ಸಂಸತ್ ನ ನಿಯಮಗಳನ್ನು ಉಲ್ಲಂಘಿಸಿದ್ದ ಭಗವಂತ್ ಮಾನ್, ಜುಲೈ 21 ರಂದು ಸಂಸತ್ ವಿಡಿಯೊ ಚಿತ್ರೀಕರಿಸಿ ಫೇಸ್‌ಬುಕ್‌ನಲ್ಲಿ ಪ್ರಸಾರ ಮಾಡಿದ್ದರು. ಈ ಬಗ್ಗೆ ತನಿಖೆ ನಡೆಸಲು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 9 ಸದಸ್ಯರ ಸಮಿತಿಯೊಂದನ್ನು ರಚಿಸಿದ್ದರು. ವಿಡಿಯೋ ಚಿತ್ರೀಕರಣ ಮಾಡಿದ್ದಕ್ಕೆ ಈಗಾಗಲೇ ಭಗವಂತ್ ಮಾನ್ ಭೇಷರತ್ ಕ್ಷಮೆಯನ್ನು ಯಾಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ