ನಗ್ರೋಟಾಗೆ ತೆರಳುತ್ತಿರುವ ಸೇನಾ ಮುಖ್ಯಸ್ಥ 
ದೇಶ

ನಗ್ರೋಟಾಗೆ ಸೇನಾ ಮುಖ್ಯಸ್ಥ ದಲ್ಬಿರ್ ಸಿಂಗ್ ಸುಹಾಗ್ ಭೇಟಿ, ಮುಂದುವರೆದ ಕೂಂಬಿಂಗ್ ಕಾರ್ಯಾಚರಣೆ

ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದ "16 ಕೋರ್‌' ಸೇನಾ ಶಿಬಿರಕ್ಕೆ ಭೇಟಿ ...

ಜಮ್ಮು: ಸೇನಾ ಮುಖ್ಯಸ್ಥ ಜನರಲ್ ದಲ್ಬಿರ್ ಸಿಂಗ್ ಸುಹಾಗ್ ಅವರು ಬುಧವಾರ ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದ "16 ಕೋರ್‌' ಸೇನಾ ಶಿಬಿರಕ್ಕೆ ಭೇಟಿ ನೀಡಿ, ಏಳು ಸೇನಾ ಅಧಿಕಾರಿಗಳು ಹಾಗೂ ಓರ್ವ ಯೋಧನನ್ನು ಬಲಿ ಪಡೆದ ಉಗ್ರ ದಾಳಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಈಗಾಗಲೇ ಮೂವರು ಉಗ್ರರನ್ನು ಹತ್ಯೆ ಮಾಡಿರುವ ಸೇನೆ ಉಳಿದ ಉಗ್ರರಿಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದೆ. ಇಂದು "16 ಕೋರ್‌' ಸೇನಾ ಶಿಬಿರಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥರಿಗೆ ಹಿರಿಯ ಕಮಾಂಡರ್ ಗಳು ಉಗ್ರ ದಾಳಿಯ ಬಗ್ಗೆ ಹಾಗೂ ಕೂಂಬಿಂಗ್ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ದಲ್ಬಿರ್ ಸಿಂಗ್ ಅವರು ಉಗ್ರ ದಾಳಿಯ ನಂತರದ ಭದ್ರತೆಯನ್ನು ಪರಿಶೀಲಿಸಿದ ಬಳಿಕ, ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದರು.

ಠಾಣ್‌ಕೋಟ್‌ ವಾಯುನೆಲೆ ಮತ್ತು ಉರಿ ಸೇನಾನೆಲೆ ಮೇಲೆ ನಡೆದ ದಾಳಿಯ ಬಳಿಕ ಉಗ್ರರು ಜಮ್ಮು- ಕಾಶ್ಮೀರದಲ್ಲಿ ಮತ್ತೂಮ್ಮೆ ಅಟ್ಟಹಾಸ ಮೆರೆದಿದ್ದು, ನಿನ್ನೆ ಪೊಲೀಸ್‌ ಸಮವಸ್ತ್ರದಲ್ಲಿ ಬಂದ ಉಗ್ರರು ಜಮ್ಮು ಹೊರವಲಯದ ನಗ್ರೋಟಾದಲ್ಲಿನ "16 ಕೋರ್‌' ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದರು. ದಾಳಿಯಲ್ಲಿ ಬೆಂಗಳೂರಿನ ಮೇಜರ್‌ ಅಕ್ಷಯ್‌ ಗಿರೀಶ್‌ ಕುಮಾರ್‌ ಸಹಿತ 7 ಮಂದಿ ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್