ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ತಮಿಳುನಾಡು, ಪುದುಚೆರಿಯಲ್ಲಿ ಚಂಡಮಾರುತ ಭೀತಿ; ಭಾರೀ ಮಳೆ ನಿರೀಕ್ಷೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿನ ಚಂಡಮಾರುತ ಇದೇ ಶುಕ್ರವಾರ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ...

ತಮಿಳುನಾಡು ಮತ್ತು ಪುದುಚೆರಿ ಮಧ್ಯೆ ಚಂಡಮಾರುತ ಬೀಸುವ ಸಾಧ್ಯತೆ.
Sumana Upadhyaya
Updated On : 30 Nov 2016, 2:34 am
ಚೆನ್ನೈ: ಬಂಗಾಳಕೊಲ್ಲಿಯಲ್ಲಿನ ಚಂಡಮಾರುತ ಇದೇ ಶುಕ್ರವಾರ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ತಮಿಳುನಾಡು ಮತ್ತು ಪುದುಚೆರಿ ಮಧ್ಯೆ ವೇದಾರಣ್ಯಂ ಎಂಬಲ್ಲಿ ಕದ್ದಲೂರಿಗೆ ಸಮೀಪ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಇಂದು ಮಧ್ಯರಾತ್ರಿಯಿಂದ ಚೆನ್ನೈಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು ತಮಿಳುನಾಡು ಮತ್ತು ಪುದುಚೆರಿಯ ಉತ್ತರ ತೀರ ಪ್ರದೇಶಗಳಲ್ಲಿ ನಾಳೆಯಿಂದ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನಾಡಾ ಎಂಬ ಚಂಡಮಾರುತ ಚೆನ್ನೈಯ ಆಗ್ನೇಯಕ್ಕೆ 770 ಕಿಲೋ ಮೀಟರ್ ದೂರದಲ್ಲಿದೆ. ಅದು ಪಶ್ಚಿಮಕ್ಕೆ ಚಲಿಸಿ ತೀವ್ರತೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. 

Advertisement

Advertisement

ಗಂಟೆಗೆ 45ರಿಂದ 55 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯಿದೆ. ಮೀನುಗಾರರು ಮೀನು ಹಿಡಿಯಲು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. 
ಕದ್ದಲೂರು ಪುದುಚೆರಿಯಿಂದ 20 ಕಿಲೋ ಮೀಟರ್ ದೂರದಲ್ಲಿದ್ದು ಅಲ್ಲಿನ ಮುಖ್ಯಮಂತ್ರಿ ವಿ,ನಾರಾಯಣಸಾಮಿ, ಚಂಡಮಾರುತ ಬೀಸುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸಮುದ್ರದ ತೀರ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದ್ದು, ನೆರೆ ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಂಡಿದ್ದೇವೆ ಎಂದಿದ್ದಾರೆ. 
ಕೇರಳದಲ್ಲಿ ಕೂಡ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments