ಅಸ್ಸಾಂನಲ್ಲಿ ಬಸ್ ಅಪಘಾತ, ನಾಲ್ವರು ಸಾವು, 20 ಮಂದಿಗೆ ಗಾಯ
ಅಸ್ಸಾಂನ ಗೋಲಘಾಟ್ ಜಿಲ್ಲೆಯಲ್ಲಿ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ....
ಗೋಲಘಾಟ್/ಜೋರಾಟ್: ಅಸ್ಸಾಂನ ಗೋಲಘಾಟ್ ಜಿಲ್ಲೆಯಲ್ಲಿ ಬಸ್ ಮತ್ತು ತೈಲ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಬಸ್ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು 20ಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುವಾಹತಿಯಿಂದ ತಿನ್ಸುಕಿಯಾಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಎದುರುಗಡೆಯಿಂದ ಬರುತ್ತಿದ್ದ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ ಎಂದು ದೆರ್ಗಾನ್ ಪೊಲೀಸ್ ಠಾಣೆಯ ಅಧಿಕಾರಿ ರೂಪಜ್ಯೋತಿ ದತ್ ಅವರು ಹೇಳಿದ್ದಾರೆ.
ಘಟನೆಯಲ್ಲಿ ಬಸ್ ಚಾಲಕ ಹಾಗೂ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ತೈಲ ಟ್ಯಾಂಕರ್ ನ ಇಬ್ಬರು ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಲಘಾಟ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದತ್ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.