ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಶ್ಮೀರದಲ್ಲಿ 1 ಮಿಲಿಯನ್ ಭಾರತೀಯ ತುಕಡಿಗಳ ನಿಯೋಜನೆಗೆ ಪಾಕಿಸ್ತಾನದ ವಿರೋಧ!

ಜಮ್ಮು-ಕಾಶ್ಮೀರದಲ್ಲಿ ಭಾರತ 1 ಮಿಲಿಯನ್ ಸೇನಾ ತುಕಡಿಗಳನ್ನು ನಿಯೋಜಿಸಿದ್ದು, ಒಂದೇ ಪ್ರದೇಶದಲ್ಲಿ ಅತಿ ಹೆಚ್ಚು ಸೈನಿಕರನ್ನು ನಿಯೋಜಿಸಿರುವ ವಿಶ್ವದ ಏಕೈಕ ಉದಾಹರಣೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದೆ.

ಪಾಕಿಸ್ತಾನ
Srinivas Rao BV
Updated On : 30 Nov 2016, 6:12 am
ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದಲ್ಲಿ ಭಾರತ 1 ಮಿಲಿಯನ್ ಸೇನಾ ತುಕಡಿಗಳನ್ನು ನಿಯೋಜಿಸಿದ್ದು, ಒಂದೇ ಪ್ರದೇಶದಲ್ಲಿ ಅತಿ ಹೆಚ್ಚು ಸೈನಿಕರನ್ನು ನಿಯೋಜಿಸಿರುವ ವಿಶ್ವದ ಏಕೈಕ ಉದಾಹರಣೆಯಾಗಿದೆ ಎಂದು ವಿರೋಧ ವ್ಯಕ್ತಪಡಿಸಿದೆ. 
ಕಾಶ್ಮೀರದಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ನಫೀಸ್ ಜಕಾರಿಯಾ, ಭಾರತ ಬೃಹತ್ ಪ್ರಮಾಣದಲ್ಲಿ ಸೇನೆ ನಿಯೋಜಿಸಿರುವುದರಿಂದ ಕಾಶ್ಮೀರಕ್ಕೆ ಸಂಬಂಧಿಸಿದ ವಿಶ್ವಸಂಸ್ಥೆ ನಿರ್ಣಯವನ್ನು ಜಾರಿಗೊಳಿಸುವುದಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಜಕಾರಿಯಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಕಳೆದ 4 ತಿಂಗಳುಗಳಲ್ಲಿ ಭಾರತೀಯ ಸೇನೆ ಮುಗ್ಧ ಕಾಶ್ಮೀರಿಗಳನ್ನು ಹತ್ಯೆ ಮಾಡಿದ್ದು ಮಾನವ ಹಕ್ಕುಗಳನ್ನು ಕಸಿದುಕೊಂಡಿದೆ ಎಂದು ಪಾಕ್ ವಕ್ತಾರ ಜಕಾರಿಯಾ ಆರೋಪಿಸಿದ್ದು, ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ತನ್ನ ಪಾತ್ರವನ್ನು ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement