ದೇಶ

ಪ.ಬಂಗಾಳದಲ್ಲಿ ಚೀತಾ ಹೆಲಿಕಾಪ್ಟರ್ ಪತನ; 3 ಸೇನಾಧಿಕಾರಿಗಳ ಸಾವು, ಓರ್ವನ ಸ್ಥಿತಿ ಗಂಭೀರ

Srinivasamurthy VN

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬೀಕರ ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸೇನಾಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಸುಕ್ನಾ ಜಿಲ್ಲೆಯ ಸಮೀಪ ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್ ಬೆಳಗ್ಗೆ ಸುಮಾರು 10.30ರಲ್ಲಿ ಪತನವಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸೇನಾಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಅಧಿಕಾರಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಅಧಿಕಾರಿಯನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಐದು ಮಂದಿ ಆಸೀನರಾಗಿ ಪ್ರಯಾಣಿಸ ಬಹುದಾಗಿದ್ದ ಚೀತಾ ಹೆಲಿಕಾಪ್ಟರ್ ಅನ್ನು ಸೇನೆಯ ವಿವಿಧ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿತ್ತು. ಹೆಲಿಕಾಪ್ಟರ್ ದುರಂತ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

SCROLL FOR NEXT