ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯ ಪಾಸ್ವರ್ಡ್ ತಿಳಿದವರೇ ಹ್ಯಾಕ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ವರ್ತನೆಯಿಂದ ಬೇಸತ್ತಿರುವವರು ಹ್ಯಾಕ್ ಮಾಡಿರುವ ಸಾಧ್ಯತೆ ಹೆಚ್ಚಿದೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಟ್ವೀಟ್ ಖಾತೆಯನ್ನು ಹ್ಯಾಕ್ ಮಾಡಿರುವುದು ಹೊರಗಿನವರು ಯಾರೋ ಅಲ್ಲ. ಅವರ ರಾಹುಲ್ ಗಾಂಧಿ ಯಾರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೋ ಅವರೇ ಹ್ಯಾಕ್ ಮಾಡಿದ್ದು, ಹ್ಯಾಕ್ ಮಾಡಿರುವವರಿಗೆ ಟ್ವೀಟ್ ಪಾಸ್ವರ್ಡ್ ಮುಂಚೆಯೇ ಗೊತ್ತಿರುವಂತಿದೆ ಎಂದು ಸ್ವಾಮಿ ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿತ್ತು. ಸಾಮಾನ್ಯ ವೇದಿಕೆಯಾಗಿರುವ ಟ್ವಿಟರ್ ಖಾತೆಗೇ ಕೇಂದ್ರ ಸರ್ಕಾರ ಸೂಕ್ತ ಭದ್ರತೆ ನೀಡಲು ಸಾಧ್ಯವಾಗಲಿಲ್ಲ. ಇನ್ನು ಭಾರತವನ್ನು ಡಿಜಿಟಲೀಕರಣ ಮಾಡಲು ಹೊರಟಿರುವ ಕೇಂದ್ರ ಸಾಮಾನ್ಯ ಜನರ ಹಣಕ್ಕೆ ಹೇಗೆ ಭದ್ರತೆಯನ್ನು ನೀಡುತ್ತದೆ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics