ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೌಟುಂಬಿಕ ಕಲಹ: ಗುಂಡು ಹಾರಿಸಿಕೊಂಡು ನಿವೃತ್ತ ಪೈಲಟ್ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಿವೃತ್ತ ಪೈಲಟ್ ಆನಂದ್ ಕುಮಾರ್ ಸಿಂಗ್ ಎಂಬುವರು ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...

ಆತ್ಮಹತ್ಯೆ
Vishwanath S
Updated On : 2 Oct 2016, 1:19 am

ನವದೆಹಲಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನಿವೃತ್ತ ಪೈಲಟ್ ಆನಂದ್ ಕುಮಾರ್ ಸಿಂಗ್ ಎಂಬುವರು ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೆಹಲಿಯ ಮಯೂರ್ ವಿಹಾರ್ ಪ್ರದೇಶದ ಮಾಲಿವಾ ಅಪಾರ್ಟ್ ಮೆಂಟ್ ನಲ್ಲಿ ಆನಂದ್ ಕುಮಾರ್ ಸಿಂಗ್ ಅವರು ನೆಲೆಸಿದ್ದು, ವಿದೇಶದಲ್ಲಿರುವ ತಮ್ಮ ಹಿರಿಯ ಪುತ್ರಿಯ ಭೇಟಿಗೆ ಸಂಬಂಧಿಸಿದಂತೆ ಪತ್ನಿ ಹಾಗೂ ಕಿರಿಯ ಮಗಳ ಜತೆ ಆನಂದ್ ಸಿಂಗ್ ಜಗಳವಾಡಿ ತಮ್ಮ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.

ಜಗಳದ ಬಳಿಕ ಆನಂದ್ ತಮ್ಮ ಪಿಸ್ತೂಲ್ ತೆಗೆದುಕೊಂಡು ಮೇಲ್ಘಾವಣಿಗೆ ಹೋಗಿ ಗುಂಡು ಹಾರಿಸಿದ್ದಾರೆ. ಇದರಿಂದ ಹೆದರಿದ ಪತ್ನಿ ಹಾಗೂ ಮಗಳು ಪಕ್ಕದ ಮನೆಗೆ ಓಡಿಹೋಗಿದ್ದರು. ಬಳಿಕ ಅರ್ಧಗಂಟೆ ಬಿಟ್ಟು ಬಂದು ನೋಡಿದರೆ ಆನಂದ್ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments