ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅಥವಾ ನಟ ಸಲ್ಮಾನ್ ಖಾನ್ 
ದೇಶ

ನಟ ಸಲ್ಮಾನ್ ಖಾನ್ ಬೆನ್ನಿಗೆ ನಿಂತ ಯೋಗಿ ಆದಿತ್ಯನಾಥ್

ಪಾಕಿಸ್ತಾನ ಕಲಾವಿದರ ಬೆಂಬಲಕ್ಕೆ ನಿಂತು ತೀವ್ರ ವಿರೋಧಕ್ಕೆ ಕಾರಣವಾಗಿರುವ ನಟ ಸಲ್ಮಾನ್ ಖಾನ್ ಬೆನ್ನಿಗೆ ಇದೀಗ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ನಿಂತಿದ್ದು, ಭಾರತದ ಹೋರಾಟವೇನಿದ್ದರೂ ಭಯೋತ್ಪಾದನೆಯ...

ಗೋರಾಖ್ಪುರ: ಪಾಕಿಸ್ತಾನ ಕಲಾವಿದರ ಬೆಂಬಲಕ್ಕೆ ನಿಂತು ತೀವ್ರ ವಿರೋಧಕ್ಕೆ ಕಾರಣವಾಗಿರುವ ನಟ ಸಲ್ಮಾನ್ ಖಾನ್ ಬೆನ್ನಿಗೆ ಇದೀಗ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ನಿಂತಿದ್ದು, ಭಾರತದ ಹೋರಾಟವೇನಿದ್ದರೂ ಭಯೋತ್ಪಾದನೆಯ ವಿರುದ್ಧವೇ ಹೊರತು ಕಲೆಯ ವಿರುದ್ಧವಲ್ಲ ಎಂದು ಭಾನುವಾರ ಹೇಳಿದ್ದಾರೆ.

ಪಾಕಿಸ್ತಾನ ಕಲಾದರಿಗೆ ಭಾರತದಲ್ಲಿ ನಿಷೇಧ ಹೇರಿರುವ ಕುರಿತಂತೆ ಹಾಗೂ ಸಲ್ಮಾನ್ ಖಾನ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಹೋರಾಟವೇನಿದ್ದರೂ ಭಯೋತ್ಪಾದನೆ ವಿರುದ್ಧವೇ ಹೊರತು, ಕಲೆಯಾಗಲೀ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳ ವಿರುದ್ಧವಾಗಲೀ ಅಲ್ಲ ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ಕಲಾವಿದರು ಭಾರತ ತೊರೆಯುವಂತೆ ಎಂಎನ್ಎಸ್ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರತಿಕ್ರಿಯೆ ನೀಡಿದ್ದ ಸಲ್ಮಾನ್ ಖಾನ್, ಪಾಕಿಸ್ತಾನ ಕಲಾವಿದರೇನು ಭಯೋತ್ಪದಾರಕರಲ್ಲ. ಕಲೆಗೂ ಭಯೋತ್ಪಾದನೆಗೂ ಸಾಕಷ್ಟು ವ್ಯತ್ಯಾಸಗಳಿವೆ. ಕಲೆ ಹಾಗೂ ಭಯೋತ್ಪಾದನೆಯನ್ನು ಸಮಾನ ರೀತಿಯಲ್ಲಿ ನೋಡಬಾರದು. ಪಾಕಿಸ್ತಾನ ಕಲಾವಿದರನ್ನು ಭಯೋತ್ಪಾದನಕರಂತೆ ನೋಡುವುದನ್ನು ನಿಲ್ಲಿಸಬೇಕೆಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!