ನವದೆಹಲಿ: ಸಿಮೀತ ದಾಳಿ ನಡೆದೇ ಇಲ್ಲ ಎಂದು ಹೇಳುತ್ತಿರುವ ಪಾಕಿಸ್ತಾನದ ಸುಳ್ಳು ಸುದ್ದಿ ಹರಡುತ್ತಿರುವುದನ್ನು ಸಾಬೀತುಡಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಕಳೆದ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಏಳು ಉಗ್ರರ ಶಿಬಿರಗಳ ಮೇಲೆ ದಾಳಿ ನಡೆಸಿ 40ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಪಾಕಿಸ್ತಾನ ತನ್ನ ಪ್ರದೇಶದಲ್ಲಿ ಯಾವುದೇ ದಾಳಿ ನಡೆದಿಲ್ಲ. ಆದರೆ ಗಡಿಯಾಚೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿತ್ತು.
ಈ ಕುರಿತು ಟ್ವೀಟರ್ ನಲ್ಲಿ ಸುಮಾರು 3 ನಿಮಿಷಿದ ವಿಡಿಯೋ ಬಿಡುಗಡೆ ಮಾಡಿರುವ ಕೇಜ್ರಿವಾಲ್ ಅವರು, ಪ್ರಧಾನಿ ಹಾಗೂ ನನ್ನ ಮಧ್ಯ ನೂರಾರು ಭಿನ್ನಾಭಿಪ್ರಾಯಗಳಿವೆ. ಆದರೆ ಪಾಕ್ ವಿರುದ್ಧದ ಸಿಮೀತ ದಾಳಿಗೆ ಸಂಬಂಧಿಸಿದಂತೆ ನಾನು ಅವರಿಗೆ ಸಲ್ಯೂಟ್ ಮಾಡುತ್ತೇನೆ ಎಂದಿದ್ದಾರೆ.
ಇದೇ ವೇಳೆ ಪಾಕಿಸ್ತಾನ ಯಾವುದೇ ದಾಳಿ ನಡೆದೇ ಇಲ್ಲ ಎಂದು ಸುಳ್ಳು ಸುದ್ದಿ ಹರಡುತ್ತಿರುವುದನ್ನು ಸಾಕ್ಷ್ಯಗಳ ಮೂಲಕ ಸಾಬೀತುಪಡಿಸುವಂತೆ ದೆಹಲಿ ಸಿಎಂ ಆಗ್ರಹಿಸಿದ್ದಾರೆ.
ಕಳೆದ ವಾರದ ಸಿಮೀತ ದಾಳಿಯನ್ನು ದ್ರೋಣ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಲಾಗಿದ್ದು, ಸಮಯ ಬಂದಾಗ ಆ ಸಾಕ್ಷ್ಯಗಳನ್ನು ಹಂಚಿಕೊಳ್ಳಲಾಗುವುದು ಎಂದು ದಾಳಿಯ ನಂತರ ಕೇಂದ್ರ ಸರ್ಕಾರ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics