ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಖಂಡಿಸಿದ್ದು, ದಾಳಿಯಲ್ಲಿ ಹುತಾತ್ಮರಾದ ಯೋಧನಿಗೆ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ದಾಳಿ ಕುರಿತಂತೆ ಟ್ಟಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆಯಾಗಿಟ್ಟು ಹೋರಾಟ ನಡೆಸುತ್ತಿರುವ ಯೋಧರ ರಕ್ಷಣೆಗಾಗಿ ಪ್ರಾರ್ಥನೆ ಮಾಡುತ್ತೇನೆ. ದಾಳಿಯಲ್ಲು ಹುತಾತ್ಮ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆಂದು ಹೇಳಿದ್ದಾರೆ.
ಇದೇ ವೇಳೆ ಉಗ್ರ ದಾಳಿಯನ್ನು ಖಂಡಿಸಿರುವ ಅವರು, ಭಯೋತ್ಪಾದನೆಯಿಂದಾಗಲೀ, ದ್ವೇಷದಿಂದಲಾಗಿ ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ದಾಳಿ ಮೂಲಕ ಭಾರತೀಯ ಸೈನಿಕರ ಧೈರ್ಯವನ್ನು ಕುಗ್ಗಿಸಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.