ಭಾರತೀಯ ಸೇನೆ 
ದೇಶ

ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಗೆ ಬೆಂಬಲ ವ್ಯಕ್ತಪಡಿಸಿದ ರಷ್ಯಾ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ ಉಗ್ರರ ಶಿಬಿರಗಳನ್ನು ಧ್ವಂಸಗೈದ ಭಾರತೀಯ ಸೇನೆಯ ಪರಾಕ್ರಮಕ್ಕೆ ರಷ್ಯಾ ಬೆಂಬಲ ಸೂಚಿಸಿದ್ದು...

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ ಉಗ್ರರ ಶಿಬಿರಗಳನ್ನು ಧ್ವಂಸಗೈದ ಭಾರತೀಯ ಸೇನೆಯ ಪರಾಕ್ರಮಕ್ಕೆ ರಷ್ಯಾ ಬೆಂಬಲ ಸೂಚಿಸಿದ್ದು, ಭಯೋತ್ಪಾದನೆ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದೆ.

ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲೆ ಉಗ್ರ ದಾಳಿ ನಡೆಸಿ 20 ಯೋಧರನ್ನು ಹತ್ಯೆಗೈದ ಉಗ್ರರು ಪಾಕಿಸ್ತಾನಿ ಉಗ್ರರೆ ಎಂದು ಬಹಿರಂಗವಾಗಿ ಪ್ರಪ್ರಥಮ ಬಾರಿಗೆ ಹೇಳಿದ ದೇಶ ರಷ್ಯಾ ಎಂದು ಭಾರತದಲ್ಲಿನ ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಎಂ ಕದಾಕಿನ್ ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕದಾಕಿನ್ ಅವರು ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ರಷ್ಯಾ ಪಾಕಿಸ್ತಾನ ಜತೆಗೆ ಜಂಟಿ ಸಮರಾಭ್ಯಾಸ ನಡೆಸಿತ್ತು. ಇದಕ್ಕೆ ಬಾರತ ಆತಂಕ ಪಡಬೇಕಿಲ್ಲ. ಉಭಯ ದೇಶಗಳ ಸೇನಾ ನಡುವಿನ ಸಾಮಾನ್ಯ ಸಮರಾಭ್ಯಾಸ ಇದಾಗಿತ್ತು. ಅಲ್ಲದೆ ಈ ಸಮರಾಭ್ಯಾಸವು ಉಗ್ರ ನಿಗ್ರಹ ಕಾದಾಟದ ಅಭ್ಯಾಸವಾಗಿತ್ತು. ಭಯೋತ್ಪಾದಕ ಕೃತ್ಯಗಳಿಗೆ ಪಾಕಿಸ್ತಾನ ತನ್ನ ಸೇನೆಯನ್ನು ಬಳಿಸಿಕೊಳ್ಳಬಾರದು ಎಂಬ ಪಾಠ ಹೇಳಿಕೊಡುವುದೇ ಈ ಸಮರಭ್ಯಾಸದ ಕಾರಣವಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!