ಹಳಿ ತಪ್ಪಿದ ಝೇಲಂ ಎಕ್ಸ್'ಪ್ರೆಸ್ ರೈಲು: ಮೂವರಿಗೆ ಗಂಭೀರ ಗಾಯ 
ದೇಶ

ಹಳಿ ತಪ್ಪಿದ ಝೇಲಂ ಎಕ್ಸ್'ಪ್ರೆಸ್ ರೈಲು: ಮೂವರಿಗೆ ಗಂಭೀರ ಗಾಯ

ಪಂಜಾಬ್'ನ ಫಿಲೌರ್ ಬಳಿ ಝೇಲಂ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗಿನ...

ಚಂಡೀಗಢ: ಪಂಜಾಬ್'ನ ಫಿಲೌರ್ ಬಳಿ ಝೇಲಂ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲಿನ 10 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಜಮ್ಮುವಿನಿಂದ ಪುಣೆಗೆ ತೆರಳುತ್ತಿದ್ದ ಝೇಲಂ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲಿನ 10 ಬೋಗಿಗಳು ಲುಧಿಯಾನ ಮತ್ತು ಜಲಂಧರ್ ನಡುವಿನ ಫಿಲೌರ್ ಬಳಿ ಬೆಳಗಿನ ಜಾವ 3.10ರ ಸುಮಾರಿಗೆ ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.
 
ಝೇಲಂ ಎಕ್ಸ್ ಪ್ರೆಸ್ ನ ಬಿ5, ಎಸ್1, ಪಿಸಿ, ಎಸ್2, ಎಸ್3, ಎಸ್4, ಎಸ್5, ಎಸ್6, ಎಶ್7 ಮತ್ತು ಎಸ್8 ಬೋಗಿಗಳು ಹಳಿ ತಪ್ಪಿದ್ದು, ಘಟನೆ ವೇಳೆ ಗಾಯಗೊಂಡವರನ್ನು ಲುಧಿಯಾನದ ನಾಗರಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರನ್ನು ಮೂರು ಬಸ್ ಗಳ ಮುಖಾಂತರ ತಲುಪಬೇಕಿದ್ದ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಟ್ಲೆಜ್‌ ನದಿಯ ಸೇತುವೆ ತಲುಪಲು ಇನ್ನು ಕೇವಲ ಕೆಲವೇ ದೂರದಲ್ಲಿ ರೈಲು ಹಳಿ ತಪ್ಪಿದ್ದು, ಒಂದು ವೇಳೆ ರೈಲು ಮುಂದೆ ಸಾಗಿ ನದಿ ಬಳಿ ಹಳಿ ತಪ್ಪಿದ್ದರೆ ದೊಡ್ಡ ದುರಂತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ದೊಡ್ಡ ದುರ್ಘಟನೆಗಳಾವುದು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಸ್ತುತ ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ