ಜಮ್ಮು: ಪಾಕಿಸ್ತಾನ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ರಜೌರಿ ಜಿಲ್ಲೆಯ ನೌಷಾರ್ ಸೆಕ್ಟರ್ ನ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿನ ಗುಂಡಿನ ದಾಳಿ ನಡೆಸುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ರಜೌರಿ ಜಿಲ್ಲೆಯ ನಾಗರಿಕ ವಸತಿ ಪ್ರದೇಶ ಸೇರಿದಂತೆ ಮೂರು ಕಡೆ ಬೆಳಗಿನ ಜಾವ 5.15ರ ಸುಮಾರಿಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ಪಡೆಯ ವಕ್ತಾರ ಮನೀಷ್ ಮೆಹ್ತಾ ಅವರು ಹೇಳಿದ್ದಾರೆ.
ಗುಂಡಿನ ದಾಳಿ ಜೊತೆಜೊತೆಗೆ ಪಾಕಿಸ್ತಾನ ಸೇನೆ ಮೋರ್ಟಾನ್ ಬಾಂಬ್ ಗಳು ಹಾಗೂ ಶೆಲ್ ಗಳು, ಸ್ವಯಂಚಾಲಿತ ಬಂದೂಕುಗಳನ್ನು ಬಳಸಿಕೊಂಡು ದಾಳಿ ನಡೆಸುತ್ತಿದ್ದು, ಪಾಕ್ ಸೇನೆ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
24 ಗಂಟೆಗಳಲ್ಲಿ ಪಾಕಿಸ್ತಾನ ಸೇನೆ 5 ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ನಿನ್ನೆ ನಾಲ್ಕು ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿ ದಾಳಿ ನಡೆಸಿದೆ.