ಕೇಜ್ರಿವಾಲ್ ಹಾಗೂ ಆಪ್ ವಕ್ತಾರ ಆಶುತೋಷ್ 
ದೇಶ

ಸೀಮಿತ ದಾಳಿ ಕುರಿತ ದಾಖಲೆಗಳನ್ನು ಕೇಜ್ರಿವಾಲ್ ಎಂದಿಗೂ ಕೇಳಿಯೇ ಇಲ್ಲ: ಆಪ್

ಸೀಮಿತ ದಾಳಿ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ದಾಖಲೆಗಳನ್ನು ಎಂದಿಗೂ ಕೇಳಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ...

ನವದೆಹಲಿ: ಸೀಮಿತ ದಾಳಿ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ದಾಖಲೆಗಳನ್ನು ಎಂದಿಗೂ ಕೇಳಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಆಪ್ ವಕ್ತಾರ ಆಶುತೋಷ್ ಅವರು, ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ದೆಹಲಿ ಸರ್ಕಾರ ಎಂದಿಗೂ ರಾಜಕೀಯ ಆಟ ಆಡಲು ಯತ್ನಿಸಿಲ್ಲ. ಕೇಂದ್ರ ಹಾಗೂ ನಮ್ಮ ನಡುವೆ ಯಾವುದೇ ರೀತಿಯ ವೈಮನಸ್ಸಿದ್ದರೂ ಅದನ್ನೆಲ್ಲಾ ಬದಿಗಿಟ್ಟು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದಿಟ್ಟ ಹೆಜ್ಜೆ ಆಪ್ ಬೆಂಬಲ ಸೂಚಿಸಿದೆ ಎಂದು ಹೇಳಿದ್ದಾರೆ.

ಕಳೆದ 4-5 ದಿನಗಳಿಂದಲೂ ಪಾಕಿಸ್ತಾನ ಭಾರತೀಯ ಸೇನೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅವಮಾನ ಮಾಡುವ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡಬೇಕಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ ಎಂದಿಕೂ ಪ್ರಧಾನಿಯವರ ಬೆನ್ನಿಗೆ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆವರು ಭಾರತೀಯ ಸೇನೆ ಸೀಮಿತ ದಾಳಿ ನಡೆಸಿರುವ ಕುರಿತಂತೆ ಕೇಂದ್ರದ ಬಳಿ ದಾಖಲೆಗಳನ್ನು ಕೇಳಿದ್ದಾರೆಂಬ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕೇಜ್ರಿವಾಲ್ ಅವರು ದಾಖಲೆ ಕೇಳಿದ್ದಾರೆಂಬ ಸಂದೇಶ ವಿಡಿಯೋದಲ್ಲಿ ಎಲ್ಲಿದೆ. ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬೆಂಬಲ ನೀಡುತ್ತೇವೆಂದು ಹೇಳಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿದೆ. ನಮ್ಮ ದೇಶದಲ್ಲಿರುವ ದೇಶಭಕ್ತರನ್ನು ನಂಬದೆ, ಬಿಜೆಪಿಯವರು ಪಾಕಿಸ್ತಾನದ ಮಾಧ್ಯಮಗಳ ಮೇಲೆ ನಂಬಿಕೆಯಿಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT