ಚೆನ್ನೈ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆಗೆ ಚುನಾವಣಾ ಆಯೋಗ ಹೊರಡಿಸಿದ್ದ ಅಧಿಸೂಚನೆಗೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಡೆಯಾಜ್ಞೆ ವಿಧಿಸಿದೆ.
ಮೀಸಲಾತಿಯಲ್ಲಿ ಅಕ್ರಮ ನಡೆದಿದೆ. ಎಸ್ ಟಿ ಗೆ ಸೂಕ್ತ ಮೀಸಲಾತಿ ನೀಡಿಲ್ಲ. ತರಾತುರಿಯಲ್ಲಿ ಮೀಸಲಾತಿ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಡಿಎಂಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕಿರುಬಾಕರನ್ ಅವರನ್ನೊಳಗೊಂಡ ಏಕ ಸದಸ್ಯ ಪೀಠ, ನಿಯಮಾನುಸಾರ ಮೀಸಲಾತಿ ಪ್ರಕಟಿಸಿಲ್ಲ ಎಂದು ಚುನಾವಣೆಗೆ ತಡೆ ನೀಡಿದೆ.
ಈ ತಿಂಗಳ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಕೋರ್ಟ್ ಸೂಚಿಸಿದ್ದು, ಈಗ ರಾಜ್ಯ ಚುನಾವಣಾ ಆಯೋಗ ಹೊಸದಾಗಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸಬೇಕಾಗಿದೆ.
ಈ ಮುಂಚೆ ಅಕ್ಟೋಬರ್ 17ರಿಂದ 19ರವೆರೆ ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು.