ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಹಾಗೂ ಭಾರತೀಯ ಸೇನೆ (ಸಂಗ್ರಹ ಚಿತ್ರ) 
ದೇಶ

ಯುಪಿಎ ಅವಧಿಯಲ್ಲೂ "ಸೀಮಿತ ದಾಳಿ", ಸೇನೆ ಬಗ್ಗೆ ಅಪನಂಬಿಕೆ ಬೇಡ: ಕಾಂಗ್ರೆಸ್

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಭಾರತೀಯ ಸೇನೆ ಸೀಮಿತ ದಾಳಿಗಳನ್ನು ನಡೆಸಿತ್ತು. ಹೀಗಾಗಿ ಭಾರತೀಯ ಸೇನೆ ವಿರುದ್ಧ ಅಪನಂಬಿಕೆ ಬೇಡ ಎಂದು ಪ್ರತಿಪಕ್ಷ ಕಾಂಗ್ರೆಸ್ ಹೇಳಿದೆ.

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿಯೂ ಭಾರತೀಯ ಸೇನೆ ಸೀಮಿತ ದಾಳಿಗಳನ್ನು ನಡೆಸಿತ್ತು. ಹೀಗಾಗಿ ಭಾರತೀಯ ಸೇನೆ ವಿರುದ್ಧ ಅಪನಂಬಿಕೆ ಬೇಡ ಎಂದು ಪ್ರತಿಪಕ್ಷ ಕಾಂಗ್ರೆಸ್ ಹೇಳಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕುರಿತಂತೆ ಅಪನಂಬಿಕೆ ವ್ಯಕ್ತಪಡಿಸುತ್ತಿರುವ ತಮ್ಮದೇ ನಾಯಕರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಯುಪಿಎ  ಅವಧಿಯಲ್ಲೂ ಸೀಮಿತದಾಳಿಗಳನ್ನು ನಡೆಸಲಾಗಿತ್ತು ಎಂದು ಹೇಳಿದೆ. ಅಲ್ಲದೆ ಈ ಬಗ್ಗೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದು, ಭಾರತೀಯ ಸೇನೆ ಗಡಿ ದಾಟಿ ಪಾಕ್ ಆಕ್ರಮಿತ  ಕಾಶ್ಮೀರದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯ ದಿನಾಂಕಗಳನ್ನು ಕೂಡ ಬಿಡುಗಡೆ ಮಾಡಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸರ್ಕಾರದ ಅವಧಿಯಲ್ಲೂ ಸೇನೆ ಸೀಮಿತ ದಾಳಿ ನಡೆಸಿತ್ತು.  2011 ಸೆಪ್ಟೆಂಬರ್ 1, 2013ರ ಜುಲೈ 28 ರಂದು ಹಾಗೂ 2014 ಜನವರಿ 14ರಂದು ಭಾರತೀಯ ಸೇನೆ ಗಡಿ ದಾಟಿ ಉಗ್ರ ನೆಲೆಗಳನ್ನು ಧ್ವಂಸಗೊಳಿಸಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ  ಕಾಂಗ್ರೆಸ್ ಪಕ್ಷದ ಮುಂಬೈ ಘಟಕದ ಮುಖ್ಯಸ್ಥರಾದ ಸಂಜಯ್ ನಿರುಪಮ್ ಅವರ ಹೇಳಿಕೆಯನ್ನು ವಿರೋಧಿಸಿರುವ ಸುರ್ಜೇವಾಲಾ ಅವರು, ಸಂಜಯ್ ನಿರುಪಮ್ ಅವರ ಹೇಳಿಕೆ ಅವರ  ವೈಯುಕ್ತಿಕ ಹೇಳಿಕೆಯೇ ಹೊರತು ಕಾಂಗ್ರೆಸ್ ಪಕ್ಷದ ಅಧಿಕೃತ ಹೇಳಿಕೆಯಲ್ಲ. ನಮ್ಮ ಸೇನೆಯ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದ್ದು, ದೇಶದ ಭದ್ರತೆಗೆ ಧಕ್ಕೆಯಾದರೆ ಯಾವುದೇ ಕಠಿಣ  ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಯುಪಿಎ ಸರ್ಕಾರದ ಅವಧಿಯಲ್ಲೂ ಸೇನೆ ಸೀಮಿತ ದಾಳಿ ನಡೆಸಿತ್ತು ಎಂದು ಹೇಳಿರುವ ಸುರ್ಜೇವಾಲಾ ಅವರು, ದಿನಾಂಕ 01.09.2011, 28.07.2013 ಮತ್ತು 14.01.2014ರಲ್ಲಿ ಸೇನೆ ಪಾಕ್  ಆಕ್ರಮಿತ ಕಾಶ್ಮೀರದಲ್ಲಿ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿತ್ತು. ಆದರೆ ಆಗ ಕಾಂಗ್ರೆಸ್ ಸರ್ಕಾರ ತನ್ನ ರಾಷ್ಟ್ರೀಯ ಭದ್ರತಾ ಹಿತದೃಷ್ಟಿಯಿಂದ ಇಂತಹ ಸೂಕ್ಷ್ಮ ವಿಚಾರಗಳನ್ನು  ಬಹಿರಂಗ ಪಡಿಸಿರಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್