ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ 
ದೇಶ

ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ ಪ್ರತಿಪಕ್ಷಗಳ ವಿರುದ್ಧ ರಕ್ಷಣಾ ತಜ್ಞ ಕಿಡಿ

ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ...

ನವದೆಹಲಿ: ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಕೇಳಿದರೆ, ಸೇನೆಯ ಸಮಗ್ರತೆಯನ್ನು ಪ್ರಶ್ನಿಸಿದ್ದಂತೆ. ದೇಶ ಉತ್ತಮ ನಾಯಕತ್ವದ ಅಡಿಯಲ್ಲಿರುವುದರಿಂದ ಇದಕ್ಕೆ ಹೆದರಿ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ರಕ್ಷಣಾ ತಜ್ಞ ಎಸ್.ಆರ್. ಸಿನ್ಹೋ ಅವರು ಬುಧವಾರ ಹೇಳಿದ್ದಾರೆ.
 
ಸೀಮಿತ ದಾಳಿ ಕುರಿತಂತೆ ಸಾಕ್ಷ್ಯಾಧಾರ ಒದಗಿಸುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತದಲ್ಲಿರುವ ಕೆಲ ಪಕ್ಷದ ನಾಯಕರು ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಪ್ರಶ್ನೆ ಏತ್ತುತ್ತಿರುವುದು ಹಾಗೂ ಸಾಕ್ಷ್ಯಾಧಾರ ಕೇಳುತ್ತಿರುವುದರಿಂದ ನಾಚಿಕೆಯಾಗುತ್ತಿದೆ. ಜನಪ್ರಿಯತೆ ಗಳಿಸುವ ಸಲುವಾಗಿ ಕೆಲ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಅವರು ಹೇಳಿದ್ದಾರೆ.

ದೇಶ ಉತ್ತಮ ನಾಯಕನ ಅಡಿಯಲ್ಲಿ ಅಭಿವೃದ್ಧಿಗೊಳ್ಳುತ್ತಿದೆ ಎಂಬುದು ಅವರಿಗೆ ಗೊತ್ತಿದೆ. ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದೂ ಅವರಿಗೆ ಗೊತ್ತಿದೆ. ಹೀಗಾಗಿ ಈ ದಾರಿಯನ್ನು ಬಳಸಿಕೊಂಡು ಜನಪ್ರಿಯತೆಗಳಿಸಲು ಯತ್ನಿಸುತ್ತಿದ್ದಾರೆ. ಪಾಕಿಸ್ತಾನ ಕಣ್ಣಿನಲ್ಲಿ ಅವರು ಧನಾತ್ಮಕ ಪ್ರತಿಕ್ರಿಯೆಗಳನ್ನು ಗಳಿಸುವ ಮೂಲಕ ಗೆಲವು ಸಾಧಿಸುತ್ತಿದ್ದಾರೆಂದು ಸಿನ್ಹೋ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ