ನರೇಂದ್ರ ಮೋದಿ-ರಾಮ, ನವಾಜ್ ಷರೀಫ್- ರಾವಣ, ಕೇಜ್ರಿವಾಲ್ -ಮೇಘನಾದ
ರಾಮನಾಗಿ ಪ್ರಧಾನಿ ನರೇಂದ್ರ ಮೋದಿ, ಪಾಕ್ ಪ್ರಧಾನಿ ನವಾಜ್ ಷರೀಫ್ ರಾವಣ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಘನಾದನ ರೀತಿ ....
ವಾರಾಣಾಸಿ : ರಾಮನಾಗಿ ಪ್ರಧಾನಿ ನರೇಂದ್ರ ಮೋದಿ, ಪಾಕ್ ಪ್ರಧಾನಿ ನವಾಜ್ ಷರೀಫ್ ರಾವಣ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಘನಾದನ ರೀತಿ ಚಿತ್ರಿಸಿರುವ ಪೋಸ್ಟರ್ ಗಳು ಉತ್ತರ ಪ್ರದೇಶದ ವಾರಣಾಸಿಯಲ್ಲಿ ರಾರಾಜಿಸುತ್ತಿವೆ.
ಶಿವಸೇನೆಯ ವಾರಾಣಸಿ ಘಟಕವು ಮುದ್ರಿಸಿರುವ ಈ ಪೋಸ್ಟರ್ಗಳಲ್ಲಿ ಮೋದಿ ಅವರನ್ನು ರಾಮನಾಗಿಯೂ, ನವಾಜ್ ಶರೀಫ್ ಅವರನ್ನು ರಾವಣನಾಗಿಯೂ ಚಿತ್ರಿಸಲಾಗಿದೆ. ಅರವಿಂದ ಕೇಜ್ರಿವಾಲ್ ಅವರನ್ನು ಸೀಮಿತ ದಾಳಿಗೆ ಸಂಬಂಧಿಸಿದ ಸಾಕ್ಷ್ಯಾಧಾರ ಬಿಡುಗಡೆಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ರಾವಣನ ಪುತ್ರ ಮೇಘನಾದನಂತೆ (ಇಂದ್ರಜಿತು) ಚಿತ್ರಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಗಡಿ ದಾಟಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ಸೀಮಿತ ದಾಳಿ ನಡೆಸಿದ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಜ್ರಿವಾಲ್ ಮಂಗಳವಾರ ಆಗ್ರಹಿಸಿದ್ದರು. ಇದಕ್ಕೂ ಮುನ್ನ ಸೋಮವಾರ ಸರ್ಜಿಕಲ್ ದಾಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.