ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ 
ದೇಶ

ಸೀಮಿತ ದಾಳಿ ಕುರಿತ ನಿರುಪಮ್ ಹೇಳಿಕೆ ಸೇನೆಯ ಸ್ಥೈರ್ಯವನ್ನು ಕುಗ್ಗಿಸುತ್ತದೆ: ಅಬು ಅಜ್ಮಿ

ಸೀಮಿತ ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ನೀಡಿರುವ ಹೇಳಕೆ ದೇಶದ ಜನತೆಯ ಹೃದಯಕ್ಕೆ ನೋವುಂಟು ಮಾಡಲಿದ್ದು, ಸೇನೆಯ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ...

ಮುಂಬೈ: ಸೀಮಿತ ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ನೀಡಿರುವ ಹೇಳಕೆ ದೇಶದ ಜನತೆಯ ಹೃದಯಕ್ಕೆ ನೋವುಂಟು ಮಾಡಲಿದ್ದು, ಸೇನೆಯ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಮಹಾರಾಷ್ಟ್ರ ರಾಜ್ಯ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ ಅವರು ಬುಧವಾರ ಹೇಳಿದ್ದಾರೆ.

ಸೀಮಿತ ದಾಳಿಯೊಂದು ನಕಲಿ ಎಂದು ಹೇಳಿದ್ದ ಸಂಜಯ್ ನಿರುಪಮ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಸೀಮತಿ ದಾಳಿ ಕುರಿತಂತೆ ಸೇನೆ ಉತ್ಸಾಹದಲ್ಲಿದೆ. ಈ ಸಂದರ್ಭದಲ್ಲಿ ಈ ರೀತಿಯಾದ ಹೇಳಿಕೆಗಳನ್ನು ನಾಯಕರು ನೀಡುವುದರಿಂದ ದೇಶದ ಜನರು ಹಾಗೂ ಭದ್ರತಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

ಸೀಮಿತ ದಾಳಿ ಕುರಿತಂತೆ ಸ್ವತಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಪ್ರಶಂಸಿಸಿದ್ದಾರೆ. ಇದೇ ಸಂದರ್ಭದಲ್ಲಿ ಅದೇ ಪಕ್ಷದ ನಾಯಕರು ವಿರುದ್ಧವಾಗಿ ಹೇಳಿಕೆ ನೀಡುವುದು ಸರಿಯಲ್ಲ. ಪಕ್ಷ ಬೆಂಬಲ ನೀಡಿದ ನಂತರವೂ ವಿರೋಧ ವ್ಯಕ್ತಪಡಿಸುವ ನಾಯಕರ ವಿರುದ್ಧ ಪಕ್ಷ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಸೀಮಿತ ದಾಳಿ ಕುರಿತಂತೆ ನಿನ್ನೆಯಷ್ಟೇ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಅವರು,  ಪ್ರತಿಯೊಬ್ಬ ಭಾರತೀಯನಿಗೂ ಪಾಕಿಸ್ತಾನ ವಿರುದ್ಧ ಸೀಮಿತಿ ದಾಳಿ ಬೇಕಿದೆ. ಆದರೆ ಅದು ನಕಲಿ ಸೀಮಿತ ದಾಳಿಯಾಗಿರಬಾರದು. ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿದ ಸೀಮಿತ ದಾಳಿ ನಕಲಿಯಾಗಿದ್ದು, ಭಾರತೀಯರ ಉದ್ದೇಶವನ್ನು ಬಿಜೆಪಿ ತಮ್ಮ ರಾಜಕೀಯವಾಗಿ ಬೆಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ