ಕೇಂದ್ರ ಸಚಿವ ವೆಂಕಯ್ಯ ನಾಯ್ಡು 
ದೇಶ

ಕಾಂಗ್ರೆಸ್ ನಾಯಕರಿಗೆ ಉತ್ತರ ಕೊಡಬೇಕಾದ ಅಗತ್ಯವಿಲ್ಲ: ವೆಂಕಯ್ಯ ನಾಯ್ಡು

ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಬೇಜವಾಬ್ದಾರಿಯುತವಾಗಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಡರಿಗೆ ಉತ್ತರ ಕೊಡಬೇಕಾದ ಅಗತ್ಯ ನಮಗಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ನವದೆಹಲಿ: ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಬೇಜವಾಬ್ದಾರಿಯುತವಾಗಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಡರಿಗೆ ಉತ್ತರ ಕೊಡಬೇಕಾದ ಅಗತ್ಯ ನಮಗಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಬುಧವಾರ ಹೇಳಿದ್ದಾರೆ.

ಸೇನೆ ನಡೆಸಿದ ಸೀಮಿತ ದಾಳಿ ಕುರಿತಂತೆ ಟೀಕೆಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬೇಜವಾಬ್ದಾರಿಯುತವಾಗಿ ಹೇಳಿಕೆ ನೀಡಿ, ಸಾಕ್ಷ್ಯಾಧಾರಗಳಿಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಉತ್ತರ ನೀಡಬೇಕಾದ ಅನಿವಾರ್ಯತೆ ನಮಗಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷದಲ್ಲಿ ನಾಯಕರು ನೀಡುತ್ತಿರುವ ಹೇಳಿಕೆಗಳು ತಪ್ಪೆಂದು ತಿಳಿದಿರುವ ಸ್ವತಃ ಕಾಂಗ್ರೆಸ್ ಪಕ್ಷವೇ ಹೇಳಿಕೆಗಳಿಗೆ ಸ್ಪಷ್ಟನೆ ನೀಡದೆ ದೂರ ಸರಿಯುತ್ತಿದೆ. ಭಾರತೀಯ ಸೇನೆಯ ಸಾಧನೆಯ ಮೇಲೆ ಭಾರತದಲ್ಲಿರುವ ಯಾವುದೇ ನಾಗರೀಕರು ಸಂಶಯ ವ್ಯಕ್ತಪಡಿಸುತ್ತಿದ್ದಾರೆಂದು ನನಗನ್ನಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಉತ್ತರ ಕೊಡಬೇಕಾದ ಅಗತ್ಯ ನಮಗಿಲ್ಲ.

ಭಾರತೀಯ ಸೇನೆ ಮಾಡಿರುವ ಸಾಧನೆ ಇಡೀ ವಿಶ್ವಕ್ಕೆ ತಿಳಿದಿರುವ ವಿಚಾರವಾಗಿದೆ. ದಾಳಿಯನ್ನು ವಿಶ್ವ ಒಪ್ಪಿಕೊಂಡಿದೆ. ಇನ್ನು ಸಾಕ್ಷ್ಯಾಧಾರ ಒದಗಿಸುವ ಅಗತ್ಯವೇನಿದೆ. ದಾಳಿ ಕುರಿತಂತೆ ಯಾರಿಗೂ ಸಂಶಯಗಳು ಏರ್ಪಟ್ಟಿಲ್ಲ. ಆದರೆ, ಪಾಕಿಸ್ತಾನ ಮಾತ್ರ ದಾಳಿ ನಡೆದಿಲ್ಲ ಎಂದು ಹೇಳುತ್ತಿದೆ. ಪಾಕಿಸ್ತಾನಕ್ಕೆ ಏನಾದರೂ ಹೇಳಲೇ ಬೇಕಿರುವ ಅನಿವಾರ್ಯತೆ ಅದಕ್ಕಿದೆ. ಹೊಡೆಸಿಕೊಂಡಿದ್ದರೂ ಕಳ್ಳತನವನ್ನು ಮಿಚ್ಚಡುತ್ತಿದೆ. ಸೀಮಿತ ದಾಳಿ ಕುರಿತಂತೆ ಸಂಶಯ ವ್ಯಕ್ತಪಡಿಸುವುದು. ಸೇನೆಗೆ ಅಗೌರವ ಸೂಚಿಸಿದಂತೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್