ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ: ಪಿಡಿಪಿ ಶಾಸಕನ ಮನೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ

ಜಮ್ಮು ಮತ್ತು ಕಾಶ್ಮೀರದಲ್ಲಿ 88ನೇ ದಿನವೂ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದಕ್ಷಿಣ ಕಾಶ್ಮೀರದಲ್ಲಿರುವ ಪಿಡಿಪಿ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 88ನೇ ದಿನವೂ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ದಕ್ಷಿಣ ಕಾಶ್ಮೀರದಲ್ಲಿರುವ ಪಿಡಿಪಿ ಶಾಸಕನ ಮನೆ ಮೇಲೆ ಬುಧವಾರ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೋಪಿಯಾನ ಜಿಲ್ಲೆಯ ಮೆಮಾಂದರ್ ನಲ್ಲಿರುವ ಪಿಡಿಪಿ ಶಾಸಕ ಹಾಗೂ ವಕೀಲ ಮೊಹಮ್ಮದ್ ಯೂಸಫ್ ಭಟ್ ಅವರ ಮನೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಶಾಸಕರ ಮನೆ ಆವರಣದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರಿಂದ ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿಗೂ ಧಕ್ಕೆಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ದಾಳಿಯ ವೇಳೆ ಶಾಸಕ ಮತ್ತು ಅವರ ಕುಟುಂಬ ಮನೆಯಲ್ಲಿರಲಿಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ ಪ್ರತ್ಯೇಕವಾದಿಗಳು ಅಕ್ಟೋಬರ್ 13ರವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದ್ದು, ಈ ಸಂಬಂಧ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಒಮರ್ ಅಬ್ದುಲ್ಲಾ ಅವರು ಕಣಿವೆ ರಾಜ್ಯದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲೇ ಮೆಹಬೂಬಾ ಮುಫ್ತಿ ಅವರು ಪ್ರವಾಸೋದ್ಯಮದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಪ್ರವಾಸೋದ್ಯಮದ ಬಗ್ಗೆ ಪ್ರಚಾರ ಮಾಡಲು ಇದು ಸೂಕ್ತ ಸಮಯ ಅಲ್ಲ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್