ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ಸೀಮಿತ ದಾಳಿ ಹೇಳಿಕೆ: ಕೇಜ್ರಿವಾಲ್ ಮೇಲೆ ಮಸಿ ದಾಳಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕುರಿತಂತೆ ಹೇಳಿಕೆ ನೀಡಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ...

ಬಿಕನೇರ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸೀಮಿತ ದಾಳಿ ಕುರಿತಂತೆ ಹೇಳಿಕೆ ನೀಡಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಮಸಿ ದಾಳಿ ನಡೆದಿರುವುದಾಗಿ ಬುಧವಾರ ತಿಳಿದುಬಂದಿದೆ.

ರಾಜಸ್ತಾನದ ಬಿಕನೇರ್ ನಗರದಲ್ಲಿ ಕೇಜ್ರಿವಾಲ್ ಅವರ ಮೇಲೆ ಮಸಿ ನಡೆದಿದ್ದು, ಪೊಲೀಸರು ಹಾಗೂ ಮಾಧ್ಯಮ ಪ್ರತಿನಿಧಿಗಳ ಎದುರಿನಲ್ಲಿಯೇ ಇಬ್ಬರು ದುಷ್ಕರ್ಮಿಗಳು ಮಸಿ ದಾಳಿ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ. ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದಾರೆಂದು ತಿಳಿದುಬಂದಿದೆ.

ಇನ್ನು ಮಸಿ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಅವರು, ಮಸಿ ದಾಳಿ ನಡೆಸಿದವರಿದೆ ದೇವರು ಒಳ್ಳೆಯದು ಮಾಡಲಿ. ಚೆನ್ನಾಗಿರಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

ಇದೇ ವೇಳೆ ತಮ್ಮ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ನನ್ನ ಹೇಳಿಕೆಗೆ ಬಿಜೆಪಿ ಯಾಕೆ ಹೆದರುತ್ತಿದೆ. ಸೀಮಿತ ದಾಳಿಯೇ ನಡೆದಿಲ್ಲ ಎಂದು ಭಾರತದ ವಿರುದ್ಧ ತಪ್ಪು ಪ್ರಚಾರ ಮಾಡುತ್ತಿರುವ ಪಾಕಿಸ್ತಾನಕ್ಕೆ ಸರಿಯಾದ ಉತ್ತರ ನೀಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೇಳಿದ್ದೆ ಅಷ್ಟೆ. ಸೀಮಿತ ದಾಳಿ ನಡೆದಿರುವ ವಿಚಾರ ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ