ಮಹದಾಯಿ ವಿವಾದ (ಸಂಗ್ರಹ ಚಿತ್ರ) 
ದೇಶ

ನ್ಯಾಯಾಧಿಕರಣದ ಹೊರಗೆ ಮಹದಾಯಿ ಚರ್ಚೆಗೆ "ಮಹಾ" ಸಿಎಂ ಅಹ್ವಾನ!

ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.

ಮುಂಬೈ: ಕರ್ನಾಟಕ ಮತ್ತು ಗೋವಾ ರಾಜ್ಯಗಳ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಾವು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು  ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಅವರು ಹೇಳಿದ್ದಾರೆ.

ಉಭಯ ರಾಜ್ಯಗಳ ರೈತರ ಹೋರಾಟಕ್ಕೆ ಕಾರಣವಾಗಿರುವ ವಿವಾದ ಸಂಬಂಧ ತಮ್ಮ ಮಧ್ಯಸ್ಥಿಕೆಯಲ್ಲಿ ಚರ್ಚಿಸಲು ಇದೇ ಅಕ್ಟೋಬರ್ 21ರಂದು ಮುಂಬೈನಲ್ಲಿ ಸಭೆ ಏರ್ಪಡಿಸಲಾಗಿದ್ದು,  ಸಭೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರಿಗೆ ದೇವೇಂದ್ರ ಫಡ್ನವಿಸ್ ಅವರು ಪತ್ರ ಬರೆದಿದ್ದಾರೆ  ಎಂದು ತಿಳಿದುಬಂದಿದೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಈ ಪತ್ರದಲ್ಲಿ ತಾವು ಗೋವಾ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಅವರೊಂದಿಗೆ ಮಾತನಾಡಿದ್ದು, ಅವರು ಕೂಡ ಸಭೆಯಲ್ಲಿ  ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ ಎಂದು ಫಡ್ನವಿಸ್ ಪತ್ರದಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ನೀರಾವರಿ ಸಚಿವ ಎಂಬಿ ಪಾಟೀಲ್ ಅವರು, ದೇವೇಂದ್ರ ಫಡ್ನವಿಸ್ ಅವರಿಂದ ಪತ್ರ ಬಂದಿರುವುದು ನಿಜ. ಪತ್ರ ಸಂಬಂಧ ರಾಜ್ಯ ಸರ್ಕಾರ ಕೂಡ  ಪ್ರತಿಕ್ರಿಯೆ ರವಾನಿಸಿದ್ದು, ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ ಎಂದು ಹೇಳಿದರು.

ಈ ಹಿಂದೆ ಮಹದಾಯಿ ವಿವಾದ ಸಂಬಂಧ ಜೆಎಂ ಪಾಂಚಾಲ್ ನೇತೃತ್ವ ಮಹದಾಯಿ ನ್ಯಾಯಾಧಿಕರಣ ಮೂರು ರಾಜ್ಯಗಳ ಪರಸ್ಪರ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ  ಸಲಹೆ ನೀಡಿದ್ದರು. ಅದರಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕೂಡ ಗೋವಾ ಸಿಎಂಗೆ ಪತ್ರಬರೆದು ವಿವಾದ ಸಂಬಂಧ ಚರ್ಚೆ ನಡೆಸುವ ಕುರಿತು ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ