ಜಯಲಲಿತಾ ಆರೋಗ್ಯ ಸ್ಥಿರವಾಗಿದೆ, ತಾತ್ಕಾಲಿಕ ಸಿಎಂ ಅವಶ್ಯಕತೆಯಿಲ್ಲ; ಎಐಎಡಿಎಂಕೆ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಸ್ಥಿರವಾಗಿದೆ, ಅವರಿಗೆ ಪ್ರಜ್ಞೆ ಇದೆ, ಹೀಗಾಗಿ ರಾಜ್ಯಕ್ಕೆ ತಾತ್ಕಾಲಿಕ ಸಿಎಂ ನೇಮಿಸುವ ಅವಶ್ಯಕತೆ ಇಲ್ಲ ಎಂದು ಎಐಎಡಿಎಂಕೆ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಆರೋಗ್ಯ ಸ್ಥಿರವಾಗಿದೆ, ಅವರಿಗೆ ಪ್ರಜ್ಞೆ ಇದೆ, ಹೀಗಾಗಿ ರಾಜ್ಯಕ್ಕೆ ತಾತ್ಕಾಲಿಕ ಸಿಎಂ ನೇಮಿಸುವ ಅವಶ್ಯಕತೆ ಇಲ್ಲ ಎಂದು ಎಐಎಡಿಎಂಕೆ ತಿಳಿಸಿದೆ.
ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಎಐಎಡಿಎಂಕೆ ವಕ್ತಾರ ಅವಧಿ ಕುಮಾರ್, ಅಮ್ಮನ ಆರೋಗ್ಯ ಸ್ಥಿರವಾಗಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯ ಅವಶ್ಯಕತೆ ಇಲ್ಲ, ತಾತ್ಕಾಲಿಕ ಸಿಎಂ ನ ಅವಶ್ಯಕತೆ ಕೂಡ ಇಲ್ಲ ಎಂದು ಹೇಳಿದ್ದಾರೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಅವರು ಸಿಎಂ ಹುದ್ದೆಯಲ್ಲಿ ಮುಂದುವರೆಯಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದಾದರೇ, ಹಣಕಾಸು ಮಂತ್ರಿ ಪನ್ನೀರ್ ಸೆಲ್ವಂ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಹೇಳಿದ್ದಾರೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.