ರಣದೀಪ್ ಸುರ್ಜೇವಾಲಾ 
ದೇಶ

ಭಾರತೀಯ ಸೇನೆಯನ್ನು ಅಮಿತ್ ಶಾ ಅವಮಾನಿಸಿದ್ದಾರೆ: ಕಾಂಗ್ರೆಸ್

ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ...

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಿನ ವಾಕ್ಸರ ಮುಂದುವರೆದಿದ್ದು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಭಾರತೀಯ ಸೇನೆಯನ್ನು ಅವಮಾನಿಸಿದ್ದು, ಈ ಕೂಡಲೇ ಅವರು ಸೇನೆ ಹಾಗೂ ಜನತೆಯ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಶುಕ್ರವಾರ ಆಗ್ರಹಿಸಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜವಾಲಾ ಅವರು, ಭಾರತೀಯ ಸೇನೆ ಮೇಲೆ ಕಾಂಗ್ರೆಸ್ ಗೆ ವಿಶ್ವಾಸವಿದೆ. ಆದರೆ ಸೀಮಿತ ದಾಳಿಯ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು,  ಯೋಧರ ಬಲಿದಾನದ ವಿಚಾರದಲ್ಲೂ ಬಿಜೆಪಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಇದೇ ವಿಚಾರ ಸಂಬಂಧ ಕಾಂಗ್ರೆಸ್ ಇಂದು ಎರಡನೇ ಬಾರಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಸಂಬಂಧ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಖೂನ್ ಕಿ ದಲಾಲಿ’ಎಂದು ಟೀಕಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ ದೇಶದ ಜನತೆಗೆ ರಾಹುಲ್ ಹೇಳಿಕೆ ಹಿಂದಿನ ಭಾವನೆ ಅರ್ಥವಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!