ವಿಕಾಸ್ ಸ್ವರೂಪ್ 
ದೇಶ

ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸದೇ ಇದ್ದರೆ ಅಪಾಯಕಾರಿ ಸಂದೇಶ ರವಾನೆ: ಭಾರತ

ಮಸೂದ್ ಅಜರ್ ಗೆ ನಿಷೇಧ, ಆರ್ಥಿಕ ದಿಗ್ಬಂಧನ ಪಟ್ಟಿಗೆ ಸೇರಿಸುವ ಭಾರತದ ಮನವಿಗೆ ನಿರಂತರವಾಗಿ ಅಡ್ಡಗಾಲು ಹಾಕುತ್ತಿರುವ ಕ್ರಮದ ಬಗ್ಗೆ ಚೀನಾ ಸರ್ಕಾರದೊಂದಿಗೆ ಮಾತುಕತೆ....

ನವದೆಹಲಿ: ಜೈಶ್-ಎ- ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ಗೆ ನಿಷೇಧ,  ಆರ್ಥಿಕ ದಿಗ್ಬಂಧನ ಪಟ್ಟಿಗೆ ಸೇರಿಸುವ ಭಾರತದ ಮನವಿಗೆ ನಿರಂತರವಾಗಿ ಅಡ್ಡಗಾಲು ಹಾಕುತ್ತಿರುವ ಕ್ರಮದ ಬಗ್ಗೆ ಚೀನಾ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ವಿಕಾಸ್ ಸ್ವರೂಪ್, ಒಂದು ವೇಳೆ ಮಸೂದ್ ಅಜರ್ ಗೆ ನಿಷೇಧ ವಿಧಿಸದೇ ಇದ್ದರೆ, ಅದು ಅಪಾಯಕಾರಿ ಸಂದೇಶವನ್ನು ರವಾನೆ ಮಾಡುತ್ತದೆ ಎಂಬುದನ್ನು ವಿಶ್ವಸಂಸ್ಥೆಗೆ ಮನವರಿಕೆ ಮಾಡಿಕೊಡಲಾಗಿದೆ ಎಂದಿದ್ದಾರೆ.

ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸುವುದರ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 14 ರಾಷ್ಟ್ರಗಳು ಒಂದು ನಿಲುವು ಹೊಂದಿದ್ದರೆ, ಚೀನಾ ಮಾತ್ರ ಭಿನ್ನ ನಿಲುವು ಹೊಂದಿದೆ. ಭಾರತದ ಮನವಿಗೆ ಸ್ಪಂದಿಸಿ ಉಗ್ರ ಮಸೂದ್ ಅಜರ್ ಗೆ ನಿಷೇಧ ವಿಧಿಸಿದರೆ ವಿಶ್ವಸಂಸ್ಥೆ ಭಯೋತ್ಪಾದನೆ ವಿರುದ್ಧ ಕಠಿಣ ಸಂದೇಶ ರವಾನೆ ಮಾಡಿದಂತಾಗುತ್ತದೆ ಎಂದು ವಿಕಾಸ್ ಸ್ವರೂಪ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಾಕಿಸ್ತಾನದ ಸಂಸತ್ ನಲ್ಲಿ ಬುರ್ಹಾನ್ ವಾನಿಯನ್ನು ಹೊಗಳಿರುವುದರ ಬಗ್ಗೆಯೂ ವಿಕಾಸ್ ಸ್ವರೂಪ್ ಪ್ರತಿಕ್ರಿಯೆ ನೀಡಿದ್ದು, ಉಗ್ರ ಬುರ್ಹಾನ್ ವಾನಿಯನ್ನು ಹೊಗಳುವ ಮೂಲಕ ಪಾಕಿಸ್ತಾನ ತನ್ನನ್ನು ತಾನೇ ಬಯಲುಮಾಡಿಕೊಂಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!