ಪ್ರಧಾನಿ ಮೋದಿ ವಿರುದ್ಧದ ರಕ್ತದ ದಲ್ಲಾಳಿ ಹೇಳಿಕೆಯನ್ನು ಖಂಡಿಸಿದ ಕೇಜ್ರಿವಾಲ್
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಕ್ತದ ದಲ್ಲಾಳಿ ಹೇಳಿಕೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ರಕ್ತದ ದಲ್ಲಾಳಿ ಹೇಳಿಕೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ.
ಸೈನಿಕರ ಬಲಿದಾನವನ್ನು ರಕ್ತದ ದಲ್ಲಾಳಿಗೆ ಹೋಲಿಕೆ ಮಾಡಿರುವ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. "ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದಾಗ ನಾವು ಪರಸ್ಪರ ಇರುವ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಈ ಹಿಂದೆಯೂ ಹೇಳಿದ್ದೇನೆ" ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಸೇನೆ ನಡೆಸಿರುವ ಸೀಮಿತ ದಾಳಿ ವಿಷಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ನೀಡಬೇಕು ಎಂದು ಕೇಜ್ರಿವಾಲ್ ಕರೆ ನೀಡಿದ್ದಾರೆ. ರಕ್ತದ ದಲ್ಲಾಳಿ ಹೇಳಿಕೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ್ದ ರಾಹುಲ್ ಗಾಂಧಿ, ಸೇನೆಯ ಕಾರ್ಯಾಚರಣೆಯನ್ನು ಬೆಂಬಲಿಸುತ್ತೇನೆ ಆದರೆ ಸೇನೆಯ ಕಾರ್ಯಾಚರಣೆಯನ್ನು ರಾಜಕೀಯವಾಗಿ ಬಳಸಿಕೊಳ್ಳುವುದನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.