ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ರಕ್ತದ ದಲ್ಲಾಳಿ ಹೇಳಿಕೆ: ರಾಹುಲ್ ಗಾಂಧಿಗೆ ಮಾನಸಿಕ ಚಿಕಿತ್ಸೆ ಅಗತ್ಯವಿದೆ ಎಂದ ಸುಬ್ರಹ್ಮಣಿಯನ್ ಸ್ವಾಮಿ

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಿರುಗೇಟು ನೀಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹುತಾತ್ಮ ಯೋಧರ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವ ಗಂಭೀರ ಆರೋಪ ಮಾಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ತಿರುಗೇಟು ನೀಡಿದ್ದಾರೆ.

ಸೇನಾ ಕಾರ್ಯಾಚರಣೆ ವಿಚಾರದಲ್ಲಿ ಲಘುವಾಗಿ ಮಾತನಾಡಿರುವ ರಾಹುಲ್ ಗಾಂಧಿಗೆ ಮಾನಸಿಕ ಚಿಕಿತ್ಸೆ ಅಗತ್ಯವಿದೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಮಾನಸಿಕ ಸ್ಥಿತಿ ಸರಿ ಇರುವ ಯಾವುದೇ ವ್ಯಕ್ತಿಯಾದರೂ ದೇಶದ ಪ್ರಧಾನಿ ಬಗ್ಗೆ ಇಂತಹ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಯಾಗಿ ಸುಬ್ರಹ್ಮಣಿಯನ್ ಸ್ವಾಮಿ ಅಗಸ್ಟಾ ವೆಸ್ಟ್ ಲ್ಯಾಂಡ್ ಚಾಪರ್ ಹಗರಣ, ಬೊಫೋರ್ಸ್ ಹಗರಣ, ನ್ಯಾಷನಲ್ ಹೆರಾಲ್ಡ್ ಹಗರಣಗಳನ್ನು ಉಲ್ಲೇಖಿಸಿದ್ದು, ದಲ್ಲಾಳಿ ಅಂದ್ರೆ ವಶೀಲಿ ಮಾಡುವುದು ಅಥವಾ ಲಾಬಿ ಮಾಡುವುದು ಎಂದರ್ಥ. ಭಾರತೀಯರಿಗೆ ಇದು ಹಿಡಿಸದ ಪದ, ಆದರೆ ಸೋನಿಯಾ ಗಾಂಧಿ ಹಾಗೂ ಅವರ ಕುಟುಂಬದವರು ಈ ವರೆಗೂ ಮಾಡಿಕೊಂಡು ಬಂದಿರುವುದೇ ಲಾಬಿ ಹಾಗೂ ಅದರಿಂದ ಹಣಗಳಿಸಿರುವುದರಿಂದ ಆದ್ದರಿಂದ ಅವರಿಗೆ ದಲ್ಲಾಳಿ ಎಂಬ ಪದ ಮುಜುಗರ ಉಂಟು ಮಾಡುವುದಿಲ್ಲ, ಇದಕ್ಕೆ ಉತ್ತಮ ಉದಾಹರಣೆ ಬೊಫೋರ್ಸ್ ಹಗರಣ ಹಾಗೂ ನ್ಯಾಷನಲ್ ಹೆರಾಲ್ಡ್ ಹಗರಣ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಒಂದೋ ಉತ್ತಮ ಶಿಕ್ಷಣದ ಅಗತ್ಯವಿದೆ ಅಥವಾ ಮಾನಸಿಕ ಚಿಕಿತ್ಸೆಯ ಅಗತ್ಯವಿದೆ ಏಕೆಂದರೆ ಕನಿಷ್ಟ ಜ್ಞಾನ ಇರುವವರು ದಲ್ಲಾಳಿ ಎಂಬ ಪದವನ್ನು ಪ್ರಧಾನಿ ವಿರುದ್ಧ ಬಳಕೆ ಮಾಡುವುದಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!