ಕೇಂದ್ರ ಸಚಿವೆ ಸ್ಮೃತಿ ಇರಾನಿ(ಸಂಗ್ರಹ ಚಿತ್ರ) 
ದೇಶ

ಸ್ಮೃತಿ ಇರಾನಿಯವರ ನಕಲಿ ಡಿಗ್ರಿ ವಿವಾದ: ಚುನಾವಣಾ ಆಯೋಗದಿಂದ ದಾಖಲೆ ಕೇಳಿದ ನ್ಯಾಯಾಲಯ

ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಶೈಕ್ಷಣಿಕ ಅರ್ಹತೆಗೆ ಸಂಬಂಧಪಟ್ಟಂತೆ ನಿಗದಿತ ದಾಖಲೆಗಳನ್ನು...

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿಯವರ ಶೈಕ್ಷಣಿಕ ಅರ್ಹತೆಗೆ ಸಂಬಂಧಪಟ್ಟಂತೆ ನಿಗದಿತ ದಾಖಲೆಗಳನ್ನು ಸಲ್ಲಿಸುವಂತೆ ನಗರ ನ್ಯಾಯಾಲಯ ದೆಹಲಿ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
2014ರಲ್ಲಿ ಲೋಕಸಭಾ ಚುನಾವಣೆ ವೇಳೆ ಶೈಕ್ಷಣಿಕ ಹಿನ್ನೆಲೆ ಕುರಿತು ಚುನಾಣಾ ಆಯೋಗಕ್ಕೆ ಸ್ಮೃತಿ ಇರಾನಿಯವರು ತಪ್ಪು ಮಾಹಿತಿ ನೀಡಿದ್ದರು ಎಂಬ ದೂರಿಗೆ ಸಂಬಂಧಪಟ್ಟಂತೆ ನ್ಯಾಯಾಲಯ ಈ ದಾಖಲೆಗಳನ್ನು ಕೇಳಿದೆ.
ಆದೇಶ ನೀಡಬೇಕಾಗಿದ್ದ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಹರಿವಿಂದರ್ ಸಿಂಗ್, ಈ ದೂರಿಗೆ ಸಂಬಂಧಪಟ್ಟಂತೆ ಕೆಲವು ವಿಷಯಗಳು ಅಗತ್ಯವಿದೆ, ಹಾಗಾಗಿ ದಾಖಲೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.
ಸ್ಮೃತಿ ಇರಾನಿಯವರ ಶೈಕ್ಷಣಿಕ ಅರ್ಹತೆ ಕುರಿತು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮಾಹಿತಿಯನ್ನು ಪತ್ತೆಹಚ್ಚಲು ಸಾಧ್ಯವಾಗುವುದಿಲ್ಲ ಎಂದು ಆಯೋಗದ ಅಧಿಕಾರಿಯೊಬ್ಬರು ಈ ಹಿಂದಿನ ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿದ್ದರು. ಆದರೆ ಮಾಹಿತಿ ಆಯೋಗದ ವೆಬ್ ಸೈಟ್ ನಲ್ಲಿ ಸಿಗುತ್ತದೆ ಎಂದು ಇರಾನಿಯವರ ವಿರುದ್ಧ ದೂರು ನೀಡಿದ ಹವ್ಯಾಸಿ ಬರಹಗಾರ ಅಹ್ಮರ್ ಖಾನ್ ಹೇಳಿದ್ದಾರೆ.
ಅಹ್ಮರ್ ಖಾನ್ ತಮ್ಮ ದೂರಿನಲ್ಲಿ ಇರಾನಿಯವರು ತಮ್ಮ ಶೈಕ್ಷಣಿಕ ಅರ್ಹತೆ ಬಗ್ಗೆ ಬೇಕೆಂದೇ ತಪ್ಪು ಮಾಹಿತಿ ನೀಡಿದ್ದಾರೆ. ಆದುದರಿಂದ ಐಪಿಸಿ ಸೆಕ್ಷನ್ 125 ಎ ಯ ಪ್ರಾತಿನಿಧ್ಯ ಕಾಯ್ದೆಯಡಿ  ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!