ಸೋನಿಯಾ ಗಾಂಧಿ, ರಾಹುಲ್ ಗಾಂಧಿ 
ದೇಶ

ಗುಜರಾತ್ ನ ಬುಡಕಟ್ಟು ಯಾತ್ರೆಯಲ್ಲಿ ರಾಹುಲ್, ಸೋನಿಯಾ ಭಾಗಿ ಸಾಧ್ಯತೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್ ಗೆ ಭೇಟಿ ನೀಡಿ, ನವಸರ್ಜನ್ ಆದಿವಾಸಿ...

ಅಹಮದಾಬಾದ್: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್ ಗೆ ಭೇಟಿ ನೀಡಿ, ನವಸರ್ಜನ್ ಆದಿವಾಸಿ ಅಧಿಕಾರ ಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ ಇಬ್ಬರು ನಾಯಕರು ಪ್ರತ್ಯೇಕವಾಗಿ ಯಾತ್ರೆಯನ್ನು ಉದ್ದೇಶಿ ಮಾತನಾಡಲಿದ್ದಾರೆ ಎನ್ನಲಾಗಿದೆ.
12 ದಿನಗಳ ಈ ಯಾತ್ರೆ ಅಕ್ಟೋಬರ್ 20 ಅಥವಾ 21ರಿಂದ ಆರಂಭವಾಗಲಿದ್ದು, ಉತ್ತರ ಗುಜರಾತ್ ನ ಬನಸ್ಕಂತ ಜಿಲ್ಲೆಯ ಅಂಬಜಿಯಿಂದ ಆರಂಭವಾಗಿ ದಕ್ಷಿಣದ ವಲ್ಸದ್ ನ ಉಂಬೇರ್ ಗಾಂವ್ ನಲ್ಲಿ ಮುಕ್ತಾಯಗೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ ಮನಿಶ್ ದೋಶಿ ಅವರು ತಿಳಿಸಿದ್ದಾರೆ.
ಅಕ್ಟೋಬರ್ 20 ಅಥವಾ 21ರಂದು ಯಾತ್ರೆ ಆರಂಭವಾಗುವ ಅಂಬಜಿಯ ಯಾತ್ರೆ ಉದ್ದೇಶಿಸಿ ಮಾತನಾಡುವಂತೆ ನಾವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದೇವೆ. ಅಲ್ಲದೆ 12ನೇ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೇಳಿಕೊಂಡಿದ್ದು, ಈ ಬಗ್ಗೆ ಇನ್ನೂ ಖಚಿತಪಡಿಸಬೇಕಿದೆ ಎಂದು ಅವರು ಹೇಳಿದ್ದಾರೆ.
ಈ ಯಾತ್ರೆಯ ಮೂಲಕ ಪಕ್ಷದ ಹಲವು ನಾಯಕರು ಮತ್ತು ಕಾರ್ಯಕರ್ತರು 12 ಬುಡಕಟ್ಟು ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳ ಆದಿವಾಸಿಗಳನ್ನು ಭೇಟಿ ಮಾಡಲಿದ್ದಾರೆ ಎಂದು ದೋಶಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ