ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

'ಪಾಕಿಸ್ತಾನ ವಿಶ್ವಾಸಘಾತುಕ ರಾಷ್ಟ್ರ': ವಿಶ್ವಸಂಸ್ಥೆಗೆ ಭಾರತದ ಮನವರಿಕೆ

ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನ ವಿಶ್ವಾಸಘಾತುಕ ರಾಷ್ಟ್ರ ಎಂದು ವಿಶ್ವಸಂಸ್ಥೆಯಲ್ಲಿ ಹೇಳಿದೆ.

'ಪಾಕಿಸ್ತಾನ ವಿಶ್ವಾಸಘಾತುಕ ರಾಷ್ಟ್ರ': ವಿಶ್ವಸಂಸ್ಥೆಗೆ ಭಾರತದ ಮನವರಿಕೆ
Srinivas Rao BV
Updated On : 9 Oct 2016, 1:37 am

ಯುನೈಟೆಡ್ ನೇಷನ್ಸ್: ವಿಶ್ವಸಂಸ್ಥೆಯಲ್ಲಿ ಮತ್ತೆ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಿರುವ ಭಾರತ, ಪಾಕಿಸ್ತಾನ ವಿಶ್ವಾಸಘಾತುಕ ರಾಷ್ಟ್ರ ಎಂದು ವಿಶ್ವಸಂಸ್ಥೆಯಲ್ಲಿ ಹೇಳಿದೆ.

ಪಾಕಿಸ್ತಾನ ವಿಶ್ವಸಂಸ್ಥೆಯ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಸ್ಪಷ್ಟವಾಗಿದೆ ಎಂದು ಭಾರತ ಹೇಳಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಯಾಗಿರುವ ಶ್ರೀನಿವಾಸ್ ಪ್ರಸಾದ್, ಪಾಕಿಸ್ತಾನದ ಪ್ರತಿನಿಧಿ ಕಾಶ್ಮೀರದ ಬಗ್ಗೆ ಪ್ರಸ್ತಾಪಿಸಿರುವುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.

ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ಪಾಕ್ ಪ್ರತಿನಿಧಿ ಮಲೀಹಾ ಲೋಧಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಭಾರತದ ಪ್ರತಿನಿಧಿ ಪಾಕಿಸ್ತಾನ ವಿಶ್ವಾಸಘಾತುಕ ರಾಷ್ಟ್ರದಂತೆ ವರ್ತಿಸುತ್ತಿದ್ದು ತನ್ನ ಪ್ರಾಂತ್ಯದ ವಿಸ್ತರಣೆಗಾಗಿ ವಿಶ್ವಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಕಾಶ್ಮೀರ ವಿವಾದ ವಿಶ್ವಸಂಸ್ಥೆಯ ಕಾರ್ಯಸೂಚಿಯಲ್ಲಿಲ್ಲ. ಪ್ರಸ್ತುತ ಸ್ವಯಂ-ನಿಯಂತ್ರಣ ಇಲ್ಲದ ಪ್ರದೇಶಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು ಪಾಕಿಸ್ತಾನ ಚರ್ಚೆಯ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತದ ಪ್ರತಿನಿಧಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement