ದೇಶ

ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆ: ಸ್ಥಳಕ್ಕೆ ಅಧಿಕಾರಿಗಳ ದೌಡು

Manjula VN

ನವದೆಹಲಿ: ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಕಿರಣ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ವಿಮಾನ ನಿಲ್ದಾಣದ ಟಿ3 ಟರ್ಮಿನಲ್ ನ ಸರಕು ಸಂಗ್ರಹ ಕಟ್ಟಡದಿಂದ ವಿಕಿರಣ ಸೋರಿಕೆಯಾಗಿದ್ದು, ಸ್ಥಳಕ್ಕೆ ಈಗಾಗಲೇ ಎಡಿಎಂಎ, ಎನ್'ಡಿಆರ್'ಎಫ್, ಪರಮಾಣು ಶಕ್ತಿ ಇಲಾಖೆ ತಜ್ಞರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಬೆಳಿಗ್ಗೆ 10.45ರ ಸುಮಾರಿಗೆ ಕರೆ ಬಂದಿತ್ತು. ಕೆಲ ವೈದ್ಯಕೀಯ ಸಾಮಾಗ್ರಿಗಳಿಂದ ವಿಕಿರಣ ಸೋರಿಕೆಯಾಗಿರಬಹುದೆಂಬ ಶಂಕೆಗಳು ವ್ಯಕ್ತವಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಅತುಲ್ ಗಾರ್ಗ್ ಅವರು ಹೇಳಿದ್ದಾರೆ.

ಫ್ರಾನ್ಸ್ ವಿಮಾನದಿಂದ ಸರಕುಗಳನ್ನು ಟಿ3 ಟರ್ಮಿನಲ್ಲಿ ಇರಿಸಲಾಗಿತ್ತು. ಈ ವೇಳ ವಿಕಿರಣ ಸೋರಿಕೆಯಾಗಿರಬಹುದು. ಪ್ರಸ್ತು ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಕೀರ್ಣದಲ್ಲಿದ್ದ ಜನರನ್ನು ತೆರವುಗೊಳಿಸಿದ್ದಾರೆಂದು ಅವರು ತಿಳಿಸಿದ್ದಾರೆ.

SCROLL FOR NEXT