ಕಾಂಗ್ರೆಸ್ ಸೇರಿದ ಅಕಾಲಿದಳದ ಮಾಜಿ ನಾಯಕ ಇಂದರ್ ಬಿರ್ ಸಿಂಗ್ 
ದೇಶ

ಕಾಂಗ್ರೆಸ್ ಸೇರಿದ ಅಕಾಲಿದಳದ ಮಾಜಿ ನಾಯಕ ಇಂದರ್ ಬಿರ್ ಸಿಂಗ್

ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಶಿರೋಮಣಿ ಅಕಾಲಿ ದಳದ ಮಾಜಿ ನಾಯಕ ಇಂದರ್‌ಬಿರ್‌ ಸಿಂಗ್‌ ಬೋಲಾರ್ಜ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಚಂಡೀಗಢ: ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಂಜಾಬ್ ನಲ್ಲಿ ಆಡಳಿತಾರೂಢ ಶಿರೋಮಣಿ ಅಕಾಲಿ ದಳದ ಮಾಜಿ ನಾಯಕ ಇಂದರ್‌ಬಿರ್‌ ಸಿಂಗ್‌ ಬೋಲಾರ್ಜ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

2008 ರಿಂದ ಅಮೃತ್ ಸರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಎಸ್ಎಡಿ ಶಾಸಕ ಅ.10 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರವನ್ನು ವಿಧಾನಸಭಾಧ್ಯಕ್ಷರಿಗೆ ತಲುಪಿಸಿದ್ದರು. ಇದಾದ ಒಂದೇ ದಿನದಲ್ಲಿ ಎಸ್ಎಡಿ ಮಾಜಿ ಶಾಸಕ, ನಾಯಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ಅಮೃತ್ ಸರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದರ್ಬಿರ್ ಸಿಂಗ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಇಂದರ್ ಬಿರ್ ಸಿಂಗ್ ಬೋಲಾರ್ಜ 2008 ರಲ್ಲಿ ಮೊದಲ ಬಾರಿಗೆ ಉಪಚುನಾವಣೆ ಮೂಲಕ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಅಮೃತ್ ಸರ ವಿಧಾನಸಭಾ ಕ್ಷೇತ್ರದಿಂದಲೇ 2012 ರಲ್ಲೂ ಪುನರಾಯ್ಕೆಯಾಗಿದ್ದರು. ಪಂಜಾಬ್ ನಲ್ಲಿ ಅಕಾಲಿದಳ ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಅವರನ್ನು ಸಂಸದೀಯ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು.  ಅಮೃತ್ ಸರ ವಿಧಾನಸಭಾ ಕ್ಷೇತ್ರದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ಪಂಜಾಬ್ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದಕ್ಕೆ ಅಕಾಲಿ ದಳ ಇಂದರ್ಬಿರ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT