ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ 91 ನೇ ಸ್ಥಾಪನಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಆರ್ ಎಸ್ಎಸ್ ನ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರ್ ಎಸ್ ಎಸ್ ನ ಸಂಸ್ಥಾಪನಾ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಸ್ವಯಂ ಸೇವಕರಿಗೆ ಶುಭಾಶಯ ಕೋರಿದ್ದಾರೆ. " ರಾಷ್ಟ್ರೀಯ ಸೇವೆಯಲ್ಲಿ ತೊಡಗಿರುವ ಸ್ವಯಂ ಸೇವಕರಿಗೆ ಶುಭವಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು 1925 ರಲ್ಲಿ ನವರಾತ್ರಿಯ ಕೊನೆಯ ದಿನವಾದ ವಿಜಯದಶಮಿಯ ದಿನದಂದು ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ನೇತೃತ್ವದಲ್ಲಿ ಪ್ರಾರಂಭಿಸಲಾಗಿತ್ತು. 2016 ರ ವಿಜಯದಶಮಿಯ ದಿನದಂದು ಆರ್ ಎಸ್ ಎಸ್ ಸಂಘಟನೆ ಸ್ಥಾಪನೆಯಾಗಿ 91 ವರ್ಷ ಪೂರ್ಣಗೊಂಡಿದೆ.